ಬೆಂಗಳೂರಿನ ಆರ್.ಟಿ. ನಗರದಲ್ಲಿರುವ ತರಳಬಾಳು ಮಠಕ್ಕೆ ಭೇಟಿ ನೀಡಿದ ಸಿಎಂ ಡಿ.ಕೆ. ಶಿವಕುಮಾರ್ ಅವರು ಪೀಠಾಧಿಪತಿಗಳಾದ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಗಳ ಆಶೀರ್ವಾದವನ್ನು ಪಡೆದಿದ್ದಾರೆ.
ತರಬಾಳು ಮಠದ ಬಗ್ಗೆ ನನಗೆ ಅಪಾರವಾದ ಗೌರವವಿದೆ. ಅನೇಕ ನ್ಯಾಯ ತೀರ್ಮಾನಗಳು ಈ ಮಠದಲ್ಲಿ ಆಗುತ್ತವೆ. ಇದು ಇಲ್ಲಿನ ಪರಂಪರೆ ಹಾಗೂ ನಂಬಿಕೆಗೆ ಸಾಕ್ಷಿ. ನೀರಾವರಿ, ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ಧಿಯನ್ನು ಮಾಡುವ, ಸಮಾಜಮುಖಿ ಕಾರ್ಯಗಳನ್ನು ಮಾಡುವ ಚಿಂತನೆಗಳನ್ನು ಶ್ರೀಗಳು ಹೊಂದಿದ್ದಾರೆ. ಅವರ ಆಶೀರ್ವಾದವನ್ನು ಪಡೆದಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.
ನೀರಾವರಿ ಮತ್ತು ಶಿಕ್ಷಣ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡುವ ಜೊತೆಗೆ, ಸಮಾಜಮುಖಿ ಕಾರ್ಯಗಳ ಮೂಲಕ ದೂರದೃಷ್ಟಿಯ ಚಿಂತನೆಗಳನ್ನು ಶ್ರೀಗಳು ಹೊಂದಿದ್ದಾರೆ. ಅವರ ಮಾರ್ಗದರ್ಶನ ಮತ್ತು ಆಶೀರ್ವಾದ ಪಡೆಯುವುದು ನನಗೆ ಸಂತಸದ ಸಂಗತಿಯಾಗಿದೆ ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಶ್ರೀಗಳ ಜತೆಗೆ ಮುಖ್ಯಮಂತ್ರಿ ಅವರು ವಿವಿಧ ವಿಚಾರಗಳ ಕುರಿತು ಸಮಾಲೋಚನೆ ನಡೆಸಿದ್ದಾರೆ. ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಸೇರಿದಂತೆ ಹಲವರು ಇದ್ದರು.