ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಜಾರಿ ಸಾಧ್ಯವೇ ಇಲ್ಲವೆಂಬ ಕಾಲಘಟ್ಟದಲ್ಲಿ ಹೋರಾಟ ಸಮಿತಿ ರಚಿಸಿಕೊಂಡು, ಸರ್ಕಾಕ್ಕೆ ನೀರಿನ ಲಭ್ಯತೆ ಕುರಿತು ಮಾಹಿತಿ ನೀಡಿ ಅಸಾಧ್ಯವಾದದನ್ನು ಸಾಧಿಸಿದ ಈ ಕ್ಷಣ ನಿಜಕ್ಕೂ ರೋಮಾಂಚನವೆAದು ಚಿತ್ರದುರ್ಗ ಜಿಲ್ಲಾ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಪಿ.ಕೋದಂಡರಾಮಯ್ಯ ಹೇಳಿದರು.
ಗೋನೂರು ಬಳಿ ಭದ್ರೆ ನೀರು ಹರಿಯುವ ಸ್ಥಳದಲ್ಲಿ ಚಿತ್ರದುರ್ಗ ಜಿಲ್ಲಾ ನೀರಾವರಿ ಹೋರಾಟ ಸಮಿತಿ ಗುರುವಾರ ಆಯೋಜಿಸಿದ್ದ ಪೂಜಾ ಕಾರ್ಯಕ್ರಮ ಹಾಗೂ ಸಮಗ್ರ ನೀರಾವರಿ ಯೋಜನೆ ಜಾರಿ 2ನೇ ಹಂತದ ಹೋರಾಟದ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭದ್ರಾ ಮೇಲ್ದಂಡೆ ಯೋಜನೆ ರಾಜ್ಯದಲ್ಲಿಯೇ ಬೃಹತ್ ಮೊತ್ತದ್ದಾಗಿದೆ. ಅನೇಕ ಅಡ್ಡಿ ಆತಂಕಗಳ ಮಧ್ಯೆಯೂ ಯೋಜನೆ ಜಾರಿಗೊಂಡು ನೀರು ಹರಿಯುತ್ತಿರುವುದು ಅತ್ಯಂತ ಸಂತಸದ ಕ್ಷಣ ಎಂದರು.
5 ಲಕ್ಷ ಎಕರೆ ಭೂಮಿಗೆ ನೀರು ಉಣಿಸುವ ಯೋಜನೆ ಆಗಿದೆ. ಆದರೆ, ಇನ್ನಷ್ಟು ಕೆರೆ-ಕಟ್ಟೆಗಳು, ತಾಲ್ಲೂಕುಗಳು ಯೋಜನೆ ವ್ಯಾಪ್ತಿಯಿಂದ ಕೈಬಿಟ್ಟಿದ್ದು ಈ ನಿಟ್ಟಿನಲ್ಲಿ ಮತ್ತೊಂದು ಹಂತದ ಹೋರಾಟ ಅಗತ್ಯವಿದೆ ಎಂದರು. ಆAಧ್ರ ಪ್ರದೇಶ ನೀರಾವರಿ ಯೋಜನೆ ವಿಷಯದಲ್ಲಿ ಮುಂಚೂಣಿಯಲ್ಲಿದೆ. ಲೋಕಸಭೆಯಲ್ಲಿ ಭದ್ರಾ
ಯೋಜನೆ ಕುರಿತು ಧ್ವನಿಯೆತ್ತಿದ ಸಂದರ್ಭ ಆಂಧ್ರಪ್ರದೇಶದಲ್ಲಿ ಹುಟ್ಟಿದ ನೀವು ನಮ್ಮ ಪರ ಧ್ವನಿಯೆತ್ತಬೇಕೆಂದು ಆಗ್ರಹಿಸಿದ್ದರು. ಆದರೆ, ನನ್ನ ಹುಟ್ಟು ಆಂಧ್ರವಾಗಿದ್ದರೂ ಕರ್ಮಭೂಮಿ ಕನ್ನಡವಾಗಿದೆ ಎಂದು ಹೇಳಿದ್ದೇ ಎಂದು ತಿಳಿಸಿದರು.
ಯೋಜನೆ ಜಾರಿಗೊಂಡು ನೀರು ಹರಿಯುತ್ತಿದ್ದರೂ ಇನ್ನಷ್ಟು ಕೆಲಸಗಳು ಆಗಬೇಕಿದೆ. ಜಿಲ್ಲೆಯ ಎಲ್ಲ ತಾಲ್ಲೂಕುಗಳು ಯೋಜನೆ ವ್ಯಾಪ್ತಿಗೆ ಸೇರಬೇಕಿದೆ. ಈ ನಿಟ್ಟಿನಲ್ಲಿ ಹೋರಾಟ ಮುಂದುವರಿಸಬೇಕಿದೆ ಎಂದರು.
ರಾಜ್ಯ-ಕೇAದ್ರ ಸರ್ಕಾರಗಳು ಯೋಜನೆ ವಿಷಯದಲ್ಲಿ ಬದ್ಧತೆ ಪ್ರದರ್ಶಿಸಬೇಕು. ಸಕಾಲಕ್ಕೆ ಅನುದಾನ ನೀಡಿ ಕಾಮಗಾರಿ ಪೂರ್ಣಗೊಳಿಸಿ, ಬಯಲುಸೀಮೆ ಪ್ರದೇಶವನ್ನು ಸಂಪೂರ್ಣ ಹಸಿರನ್ನಾಗಿಸಲು ಮುಂದಾಗಬೇಕು. ಕೇಂದ್ರ ಸರ್ಕಾರ ತನ್ನ ಮಾತನ್ನು ಉಳಿಸಿಕೊಳ್ಳಬೇಕೆಂದು ಆಗ್ರಹಿಸಿದರು.
ಸಮಿತಿ ಹಿರಿಯ ಮುಖಂಡ ಬೇಡರರೆಡ್ಡಿಹಳ್ಳಿ ಬಸವರೆಡ್ಡಿ ಮಾತನಾಡಿ, ಹೋರಾಟದ ಆರಂಭದಲ್ಲಿ
ಜನಬೆಂಬಲ ದೊರೆಯಲಿಲ್ಲ. ಆದರೂ ಸುಧೀರ್ಘ ಚಳವಳಿ ಪರಿಣಾಮ ಯೋಜನೆ ಜಾರಿಗೊಂಡಿದೆ. ಮೊಳಕಾಲ್ಮೂರು ಸೇರಿ ಇನ್ನಷ್ಟು ತಾಲ್ಲೂಕುಗಳ ಕೆರೆಗೆ ನೀರು ಹರಿಯಬೇಕಿದೆ. ಈ ನಿಟ್ಟಿನಲ್ಲಿ ಮತ್ತೊಂದು ಹಂತದ ಚಳವಳಿ ಅಗತ್ಯವೆಂದು ಹೇಳಿದರು.
ಛಲವಾದಿ ಮಠದ ಶ್ರೀ ಬಸವನಾಗಿದೇವ ಸ್ವಾಮೀಜಿ ಮಾತನಾಡಿ, ನಾವು ಹೋರಾಟದಲ್ಲಿ ಇರಲಿಲ್ಲ. ಆದರೆ, ಚಳವಳಿಯಲ್ಲಿ ಪಾಲ್ಗೊಂಡು ಸಾರ್ಥಕತೆ ಕಂಡುವರನ್ನು ಗೌರವಿಸುವ ಗುಣ ಹೊಂದಿದ್ದೇವೆ. ಎಲ್ಲ ಚಳವಳಿಗಾರರನ್ನು ಪೀಠದ ವತಿಯಿಂದ ಗೌರವಿಸಲು ಶೀಘ್ರ ಕ್ರಮಕೈಗೊಳ್ಳಲಾಗುವುದು ಎಂದರು.
ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಮಾತನಾಡಿ, ಭದ್ರಾ ಮೇಲ್ದಂಡೆ ಯೋಜನೆ ಎಂದಾಕ್ಷಣ ಅಸಾಧ್ಯವೆಂಬ ಮನೋಭಾವನೆ ಜನರಲ್ಲಿತ್ತು. ಅದನ್ನು ಅನುಷ್ಠಾನಕ್ಕೆ ತರುವಲ್ಲಿ
ಹೋರಾಟಗಾರರು, ಮಠಾಧೀಶರ ಬದ್ಧತೆ ಕಾರಣವಾಗಿದೆ ಎಂದು ತಿಳಿಸಿದರು. ಹೋರಾಟದ ಹಾದಿಯಲಿ ಬದುಕನ್ನೇ ಸಮರ್ಪಿಸಿದವರನ್ನು ನಾವೆಲ್ಲರೂ ಸ್ಮರಿಸಬೇಕಾಗಿದೆ. ಮುಖ್ಯವಾಗಿ ರೈತರು ಕೃಷಿ ಭೂಮಿ ಗುತ್ತಿಗೆ ನೀಡುವ ಪದ್ಧತಿ, ಮಾರಾಟದ ಮನಸ್ಥಿಯಿಂದ ಹೊರಬಂದು, ಸ್ವಂತ ಉಳುಮೆ ಮಾಡಲು ಮುಂದಾಗಬೇಕು ಎಂದರು.
ಬರಡು ನೆಲವನ್ನು ಹಸಿರುಗೊಳಿಸಲು ಹೋರಾಟ ನಡೆಸಿದವರ ಪಾದಗಳಿಗೆ ನಾವೆಲ್ಲರೂ ನಮಿಸಬೇಕು. ಅವರ ಹೆಸರು ಹೇಳಿಕೊಂಡು ಕೃಷಿಚಟುವಟಿಕೆ ಕೈಗೊಂಡು ಉನ್ನತಿ ಸಾಧಿಸಬೇಕು ಎಂದು ಎಂಎಎಲ್ಸಿ ಕೆ.ಎಸ್.ನವೀನ್ ತಿಳಿಸಿದರು. ಮುಖ್ಯವಾಗಿ ಅಗಲಿದ ಚೇತರಿಗೆ ನಮನ ಸಲ್ಲಿಸಬೇಕು. ಈಗ ಅರ್ಧ ಗೆಲುವು ಸಾಧಿಸಿದ್ದು, ಇನ್ನರ್ಧ ಸಾಧನೆಗೆ ನಾವೆಲ್ಲರೂ ಸಮಿತಿ ಜೊತೆಗೆ ಹೆಜ್ಜೆ ಹಾಕಬೇಕಿದೆ ಎಂದರು. ಕೇಂದ್ರ ಸರ್ಕಾರ ಕೊಟ್ಟ ಮಾತಿನಂತೆ 5,300 ಕೋಟಿ ರೂ. ಬಿಡುಗಡೆಗೆ ಅಗತ್ಯ ಕ್ರಮಕೈಗೊಳ್ಳುತ್ತಿದೆ ಹಾಗೂ ನೇರ ರೈಲ್ವೆ ಮಾರ್ಗ ಪ್ರಗತಿಯಲ್ಲಿದೆ. ಈ ಎರಡು ಯೋಜನೆಗಳು 2028ರೊಳಗೆ ಪೂರ್ಣಗೊಳ್ಳುವ ವಿಶ್ವಾಸವಿದೆ
ಎಂದರು. ರ್ಲಹಳ್ಳಿ ರವಿಕುಮಾರ್, ಲಕ್ಷಿö್ಮÃಕಾಂತ್, ಮಲ್ಲಿಕಾರ್ಜುನ್, ಕೆ.ಟಿ.ತಿಪ್ಪೇಸ್ವಾಮಿ, ಎಂ.ಡಿ.ರವಿ, ಜೆ.ಯಾದವರೆಡ್ಡಿ, ರೆಡ್ಡಿಹಳ್ಳಿ ವೀರಣ್ಣ ಮಾತನಾಡಿ, ಹೋರಾಟ ಸಮಿತಿ ಚಳವಳಿ ಹಾದಿ ಹಾಗೂ ಹೋರಾಟಗಾರರನ್ನು ಸದಾ ಸ್ಮರಿಸುವ ಗುಣ ನಾವೆಲ್ಲರೂ ಬೆಳೆಸಿಕೊಳ್ಳಬೇಕು. ಮುಖ್ಯವಾಗಿ ಸಮಗ್ರ ನೀರಾವರಿ ಜಾರಿಗೆ ಹೋರಾಟ ಕೈಗೆತ್ತಿಕೊಳ್ಳಬೇಕೆಂದು ತಿಳಿಸಿದರು.
ಸಮಿತಿ ಸಂಚಾಲಕರಾದ ಚಳ್ಳಕೆರೆ ಬಸವರಾಜ್, ನರೇನಹಳ್ಳಿ ಅರುಣ್ಕುಮಾರ್, ಜೋಗಿಮಟ್ಟಿ
ಮಹೇಶಬಾಬು, ಮುಖಂಡರಾದ ಪ್ರಸನ್ನ ಎಂ.ಜಯಣ್ಣ, ಬಾಗೇನಾಳ್ ಕೊಟ್ರಬಸಪ್ಪ, ವೆಂಕಟೇಶ್, ದಗ್ಗೆ ಶಿವಪ್ರಕಾಶ್, ಸಿ.ಶಿವುಯಾದವ್, ಕೂನಿಕೆರೆ ರಾಮಣ್ಣ, ಡಿ.ಸಿ.ನಾಗರಾಜ್, ಮುದ್ದಪುರ ನಾಗರಾಜ್, ಹಂಪಯ್ಯನಮಾಳಿಗೆ ಬಸವರಾಜ್, ಎಚ್.ಲಕ್ಷö್ಮಣ್, ವೀರೇಂದ್ರ ಕೋಗುಂಡೆ ಮಠ, ಪಾಂಡುರAಗಪ್ಪ, ಗೌನಹಳ್ಳಿ ಗೋವಿಂದಪ್ಪ, ಟಿ.ಎಂ.ಪ್ರದೀಪ್ಕುಮಾರ್,
ಮಲ್ಲಿಕಾರ್ಜುನ್, ರೆಡ್ಡಿಹಳ್ಳಿ ವೀರಣ್ಣ, ಟಿ.ಮಂಜಣ್ಣ, ದಯಾನಂದ್, ರೇವಣ್ಣಸಿದ್ದಪ್ಪ, ಮುಂಗಸವಳ್ಳಿ ಪ್ರಕಾಶ್, ಸಂಪತ್ಕುಮಾರ್, ಗುರುಮೂರ್ತಿ, ರಾಜಣ್ಣ, ಕೆಪಿಎಂ ಗಣೇಶಯ್ಯ, ಮಲ್ಲೇಶ್ ಇತರರಿದ್ದರು.