ದೆಹಲಿ: ನ್ಯೂಜಿಲೆಂಡ್ ವಿರುದ್ಧದ ಮೊದಲ ODI ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಕಿವಿಸ್ ಪಡೆ 185 ರನ್‌ಗಳಿಗೆ ಆಲೌಟ್ ಆಗಿತ್ತು.
ಟೀಂ ಇಂಡಿಯಾ ಬ್ಯಾಟಿಂಗ್ ವೇಳೆ 3 ಬಾರಿ ಮಳೆ ಅಡ್ಡಿಪಡಿಸಿತ್ತು. ಹೀಗಾಗಿ, DLS ನಿಯಮದ ಪ್ರಕಾರ, 32 ಓವರ್‌ನಲ್ಲಿ 143 ರನ್‌ಗಳ ಗುರಿಯನ್ನು ಭಾರತಕ್ಕೆ ನೀಡಲಾಗಿತ್ತು. ಈ ಗುರಿಯನ್ನು ಹಿಂಬಾಲಿಸಿ ಭಾರತ, 23 ಓವರ್‌ನಲ್ಲಿ 5 ವಿಕೆಟ್‌ಗಳನ್ನು ಕಳೆದುಕೊಂಡು ತಲುಪಿತು. ಭಾರತದ ಪರ ಕೊಹ್ಲಿ, 74, ಗಿಲ್ 37 ರನ್‌ಗಳಿಸಿ, ಮಿಂಚಿದರು.