ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಅಧ್ಯಯನ ವಿಭಾಗಗಳು ಹಾಗೂ ಸಂಲಗ್ನಗೊಂಡ ಸ್ನಾತಕೋತ್ತರ ಕಾಲೇಜುಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ PG CET ಮೂಲಕ ಭರ್ತಿಯಾಗದೆ ಖಾಲಿ ಉಳಿದಿರುವ MBA (Master of Business Administration) ಪದವಿಯ ಸೀಟುಗಳ ಪ್ರವೇಶಾತಿಗೆ ಅರ್ಜಿ ಅಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಅಕ್ಟೋಬರ್ 12 ರೊಳಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್ www.davangereuniversity.ac.in ಅನ್ನು ಸಂಪರ್ಕಿಸಬಹುದು ಎಂದು ದಾವಣಗೆರೆ ವಿಶ್ವ ವಿದ್ಯಾನಿಲಯ ಕುಲಸಚಿವರು ತಿಳಿಸಿದ್ದಾರೆ.