LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ: ರೈತ ಸಂಘದವರಿಂದ ಪ್ರತಿಭಟನೆ

ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ: ರೈತ ಸಂಘದವರಿಂದ ಪ್ರತಿಭಟನೆ

 

ಚಿತ್ರದುರ್ಗ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಗರಕ್ಕೆ ಆಗಮಿಸುವ ಮುನ್ನ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತ ಮಳೆ ಕೊರತೆಯಿಂದ ಜಿಲೆಯ ರೈತರು ಈಗಾಗಲೆ ಸಂಕಷ್ಟದಲ್ಲಿರುವುದರಿಂದ ಜಿಲ್ಲೆಯನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಿ ಬೆಳೆ ಪರಿಹಾರ ನೀಡಬೇಕು. ಬೆಳೆ ವಿಮೆ ಪಾವತಿಸಿರುವ ರೈತರಿಗೆ ಅಧಿಕಾರಿಗಳು ಹಾಗೂ ವಿಮೆ ಕಂಪನಿಯವರು ಶಾಮೀಲಾಗಿ ಮೋಸ ಮಾಡಿದ್ದಾರೆ. ಬೆಸ್ಕಾಂ ಇಲಾಖೆಯಲ್ಲಿ ರೈತರ ಪಂಪ್ಸೆಟ್ಗಳಿಗೆ ಸ್ವಯಂ ವೆಚ್ಚದಿಂದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಎರಡರಿಂದ ಮೂರು ಲಕ್ಷ ರೂ.ಗಳ ವೆಚ್ಚವಾಗುತ್ತಿದ್ದು, ಅಕ್ರಮ-ಸಕ್ರಮದಡಿಯಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು. ರೈತರ ತೋಟದ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಅವಕಾಶವಿದ್ದರೂ ಅಧಿಕಾರಿಗಳ ನಿರ್ಲಕ್ಷೆಯಿಂದ ರೈತರು ಕತ್ತಲಲ್ಲಿ ಜೀವಿಸುವಂತಾಗಿದೆ. ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ರೈತರ ನೆರವಿಗೆ ಮುಂದೆ ಬರಬೇಕು. ಇಲ್ಲವಾದಲ್ಲಿ ಶನಿವಾರ ನಗರಕ್ಕೆ ಆಗಮಿಸುತ್ತಿರುವ ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ಗೆ ಕಪ್ಪುಪಟ್ಟಿ ಪ್ರದರ್ಶಿಸಲಾಗುವುದೆಂದು ಎಚ್ಚರಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಇಚ್ಚಾಶಕ್ತಿ ಕೊರತೆಯಿಂದ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ವಿಳಂಭವಾಗುತ್ತಿದೆ. ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳಿಂದ ರೈತರಿಗೆ ಯಾವುದೇ ಪ್ರಯೋಜನವಿಲ್ಲ. ಭದ್ರಾಮೇಲ್ದಂಡೆ ಯೋಜನೆಯನ್ನು ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಿ ಜಿಲ್ಲೆಗೆ ನೀರು ಹರಿಸುವಂತೆ ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ್ ಒತ್ತಾಯಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಬಿ.ನಿಜಲಿಂಗಪ್ಪ, ರೈತ ಮುಖಂಡರುಗಳಾದ ಎಂ.ಸಿದ್ದಪ್ಪ ಹಳಿಯೂರು, ನಾಗರಾಜ್ ಮುದ್ದಾಪುರ, ಎಂ.ಶಿವಮೂರ್ತಿ, ಸಂಜೀವಪ್ಪ, ಮಾರುತಿ, ಎಂ.ಕೆ.ಓಬಳೇಶ, ರಾಜಶೇಖರಪ್ಪ, ಕೆ.ಎ.ಕಲ್ಲೇಶ, ಗುರುಸಿದ್ದಪ್ಪ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ FIR.!ಶಿಕ್ಷಣ ಸಚಿವರ ರಾಜೀನಾಮೆ ಸೋನಮ್ ವಾಂಗ್ಚುಕ್ ಪ್ರತಿಕ್ರಿಯೆ ಹೀಗಿದೆ.!ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ.!ಸೋನಮ್ ವಾಂಗ್ಚುಕ್ ಅವರ ಬಗ್ಗೆ ಮಾತನಾಡಿದ ವಿಮರ್ಶಕರಿಗೆ ಇಲ್ಲಿದೆ ಉತ್ತರ ಶಾಪ ವಿಮೋಚನ ವಿಧಿ ಎಂಬುದು ಸನಾತನ ಧರ್ಮದಲ್ಲಿ ಹಿಂದಿನ ಜನ್ಮದ ನಕಾರಾತ್ಮಕ ಆಲೋಚನೆಗಳಿಂದ ಉಂಟಾಗುವ ಕಷ್ಟಗಳನ್ನು ದೂರ ಮಾಡಲು ಮಾಡುವ ದಿವ್ಯ ಪ್ರಕ್ರಿಯೆಯಾಗಿದೆ. ಈ ಜಿಲ್ಲೆಗಳಲ್ಲಿ ಇಂದು  ಭಾರೀ ಮಳೆ: ಶಾಲಾ ಕಾಲೇಜುಗಳಿಗೆ ರಜೆಶಿಕ್ಷಣ ಮಂತ್ರಿ ಧರ್ಮೆಂದ್ರ ಪ್ರಧಾನ್ ರಾಜಿನಾಮೆಗೆ ಒತ್ತಾಯಿಸಿ ವಕೀಲರಿಂದ ಪ್ರತಿಭಟನೆಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ: ರೈತ ಸಂಘದವರಿಂದ ಪ್ರತಿಭಟನೆಬಿಜೆಪಿ ಯಿಂದ ಕಾಂಗ್ರೆಸ್ ಗೂಂಡಾ ವರ್ತನೆ ವಿರುದ್ದ ಧಿಕ್ಕಾರ.!ಹಿರಿಯೂರು ಉಪ ಚುನಾವಣೆ: ಸಿ.ಶಿವುಯಾದವ್ ಗೆ ಕಾಂಗ್ರೆಸ್ ಟಿಕೆಟ್ ನೀಡಿ.!