ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅಧೀನದಲ್ಲಿರುವ ಕ್ರೈಸ್ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಕಳೆದ ಜುಲೈ ತಿಂಗಳಲ್ಲಿ 1087 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಕೆ. ಶಿವಕುಮಾರ್ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ. ಕಳೆದ ಜುಲೈ ತಿಂಗಳಲ್ಲಿ ಖಾಲಿ ಇರುವ 1087 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದ್ದು, ಉಳಿದ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.
ಕ್ರೈಸ್ ಶಾಲಾ-ಕಾಲೇಜುಗಳು ಉತ್ತಮ ಫಲಿತಾಂಶ ಪಡೆಯುತ್ತಿದ್ದು, ಸಮಾಜ ಕಲ್ಯಾಣ ಇಲಾಖೆಯಡಿ ಬರುವ ಹಾಸ್ಟೆಲ್ ಗಳಿಗೆ ಕಳಪೆ ಆಹಾರ ಧಾನ್ಯ ಪೂರೈಕೆ ಸಂಬಂಧ 54 ಕೇಸು ದಾಖಲಾಗಿವೆ. 23 ಪ್ರಕರಣ ಮುಕ್ತಾಯವಾಗಿದ್ದು, 31 ಇಲಾಖೆ ವಿಚಾರಣೆ ಹಂತದಲ್ಲಿವೆ ಎಂದು ಹೇಳಿದ್ದಾರೆ.