ಕೋಡಿಮಠ ಶ್ರೀ ಸ್ವಾಮೀಜಿಯ ಸ್ಫೋಟಕ ಭವಿಷ್ಯ…!
ಧಾರವಾಡ: ಅರಸೀಕೆರೆ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಧಾರವಾಡದಲ್ಲಿ ಭವಿಷ್ಯ ನುಡಿದಿದ್ದಾರೆ.
ಧಾರವಾಡದಲ್ಲಿ ಐತಿಹಾಸಿಕ ಜಂಬೂ ಸವಾರಿ ಉತ್ಸವದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀಗಳು, ಮುಂಗಾರು ಮಳೆಯ ವೈಫಲ್ಯ, ಬರಗಾಲ ಹಾಗೂ ಪ್ರಾಕೃತಿಕ ವಿಕೋಪಗಳ ಕುರಿತು ತಾವು ಈ ಹಿಂದೆ ಹೇಳಿದ್ದ ಮಾತುಗಳನ್ನು ನೆನಪಿಸಿದ ಶ್ರೀಗಳು, ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಹಿಂಗಾರು ಮಳೆ ಉತ್ತಮವಾಗಿ ಸುರಿದು ಜನರಿಗೆ ಸುಭಿಕ್ಷೆ ಮತ್ತು ನೆಮ್ಮದಿ ಸಿಗಲಿದೆ ಎಂದು ಹೇಳಿದ್ದಾರೆ.