ಕೊಪ್ಪಳ: ರಾಜ್ಯದಲ್ಲಿ ಎರಡು ಸಾವಿರ ಸಹಾಯಕ ಪ್ರಾಧ್ಯಾಪಕರು ಮತ್ತು ವಿವಿಗಳಿಗಾಗಿ ಒಂದು ಸಾವಿರ ಪ್ರಾಧ್ಯಾಪಕರ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು. ರಾಜ್ಯದ ವಿವಿಗಳಲ್ಲಿ ಎಐ ತರಬೇತಿ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಇಲಾಖೆ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.
ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಮಂಗಳೂರು ಗ್ರಾಮದಲ್ಲಿ ನಡೆದ ಪ್ರಜಾಸೇವೆ ಆಂದೋಲನದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಶೀಘ್ರವೇ 3000 ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಸಹಾಯಕ ಪ್ರಾಧ್ಯಾಪಕರ 3 ಸಾವಿರ ಹಾಗೂ ವಿವಿಗಳಲ್ಲಿ ಪ್ರಾಧ್ಯಾಪಕರ 1 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಹೇಳಿದ್ದಾರೆ.