Also read
ಶಿವಮೊಗ್ಗ: ಬಜೆಟ್‌ನಲ್ಲಿ ಪ್ರಕಟಿಸಿದಂತೆಯೇ ಈ ಶೈಕ್ಷಣಿಕ ಸಾಲಿನಿಂದ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯ ಪುಸ್ತಕ ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ನೋಟ್‌ಬುಕ್‌ಗಳನ್ನು ಉಚಿತವಾಗಿ ವಿತರಿಸುವ ಉದ್ದೇಶವಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ, ನಂತರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಲಾಂ ಸೆಂಟರ್‌ಗೆ ಭೇಟಿ ನೀಡಿದ ವೇಳೆ ಈ ಘೋಷಣೆ ಮಾಡಿದ್ದಾರೆ.