-ಹಡಪದ ಅಪ್ಪಣ್ಣ ಅವರ ವಚನ.!
ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಎಡಬಲವೆಂದೇನೊ ನಿಮ್ಮ ಅಡಿಗಳನರಿದವಂಗೆ ?
ಕಡೆ ನಡುವೆಂದೇನೊ ಮೃಡನ ಹಾಡುವಂಗೆ ?
ಕುಲಛಲವೆಂದೇನೊ ಮನದ ಹೊಲೆಯ ಕಳೆದವಂಗೆ ?
ತಲೆಕಾಲೆಂದೇನೊ ಮಾಯೆಯ ಬಲೆಯ ನುಸುಳಿದವಂಗೆ ?
ಕಲಿಯುಗದ ಕತ್ತಲೆಯ ದಾಂಟಿದವಂಗೆ, ನಿಮ್ಮ ನೆಲೆಯನರಿದ ಶರಣಂಗೆ
ಇನ್ನು ಸ್ಥಲನೆಲೆ ಆವುದುಂಟು ಹೇಳಾ,ಬಸವಪ್ರಿಯ ಕೂಡಲಚೆನ್ನಬಸವಣ್ಣಾ ?
-ಹಡಪದ ಅಪ್ಪಣ್ಣ