LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಈ ಜಿಲ್ಲೆಗಳಲ್ಲಿ ಇಂದು  ಭಾರೀ ಮಳೆ: ಶಾಲಾ ಕಾಲೇಜುಗಳಿಗೆ ರಜೆ

ಈ ಜಿಲ್ಲೆಗಳಲ್ಲಿ ಇಂದು  ಭಾರೀ ಮಳೆ: ಶಾಲಾ ಕಾಲೇಜುಗಳಿಗೆ ರಜೆ

ಬೆಂಗಳೂರು: ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜು. 25ರಂದು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಹವಾಮಾನ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.

1. ಜಿಲ್ಲೆಯಲ್ಲಿ ಈ ಕೆಳಗಿನ ಎಲ್ಲಾ ಸಂಸ್ಥೆಗಳಿಗೆ ದಿನಾಂಕ 25.07.2026 ರಂದು ರಜೆಯನ್ನು ಘೋಷಿಸಲಾಗಿದೆ ಹಾಗೂ ಇದನ್ನು ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, 2005 ರ ಪ್ರಕಾರ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು.ಜಿಲ್ಲೆಯ ಎಲ್ಲಾ ಅಂಗನವಾಡಿಗಳು

 

ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಹಾಗು ಖಾಸಗಿ ಶಾಲೆಗಳು(ಎಲ್ಲಾ ವಸತಿ ಶಾಲೆಗಳೂ ಸೇರಿದಂತೆ)

 

ಜಿಲ್ಲೆಯ ಎಲ್ಲಾ ಪದವಿ ಪೂರ್ವ ಕಾಲೇಜುಗಳು -12ನೇ ತರಗತಿಯವರಿಗೆ(ಎಲ್ಲಾ ವಸತಿ ಕಾಲೇಜುಗಳೂ ಸೇರಿದಂತೆ) ಜಿಲ್ಲೆಯ ಎಲ್ಲಾ ITI ಮತ್ತು Diploma ಕಾಲೇಜುಗಳು (ಎಲ್ಲಾ ವಸತಿ ಕಾಲೇಜುಗಳೂ ಸೇರಿದಂತೆ)

 

2. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.3. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.

 

4. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.

 

5. ಪ್ರವಾಸಿಗರು/ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.

 

6. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ದ ಸ್ಥಿತಿಯಲ್ಲಿರಿಸಿಕೊಳ್ಳುವುದು.

+ ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು.

 

ಟೋಲ್ ಫ್ರೀ ಸಂಖ್ಯೆ: 1077 0824-2442590

ಉಡುಪಿ ಜಿಲ್ಲೆ

ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಭಾರತೀಯ ಹವಾಮಾನ ಇಲಾಖೆಯು ಮುಂದಿನ ಕೆಲವು ದಿನ ತೀವ್ರ ಮಳೆಯ ಆರೆಂಜ್ ಅಲರ್ಟ್ ಘೋಷಿಸಿರುವುದರಿಂದ, ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಜುಲೈ 25ರ ಶನಿವಾರದಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಡಿಪ್ಲೊಮಾ ಮತ್ತು ಐಟಿಐ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ. ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಈ ರಜೆ ಅನ್ವಯಿಸುವುದಿಲ್ಲ. ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ತಿಳಿಸಿದೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ FIR.!ಶಿಕ್ಷಣ ಸಚಿವರ ರಾಜೀನಾಮೆ ಸೋನಮ್ ವಾಂಗ್ಚುಕ್ ಪ್ರತಿಕ್ರಿಯೆ ಹೀಗಿದೆ.!ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ.!ಸೋನಮ್ ವಾಂಗ್ಚುಕ್ ಅವರ ಬಗ್ಗೆ ಮಾತನಾಡಿದ ವಿಮರ್ಶಕರಿಗೆ ಇಲ್ಲಿದೆ ಉತ್ತರ ಶಾಪ ವಿಮೋಚನ ವಿಧಿ ಎಂಬುದು ಸನಾತನ ಧರ್ಮದಲ್ಲಿ ಹಿಂದಿನ ಜನ್ಮದ ನಕಾರಾತ್ಮಕ ಆಲೋಚನೆಗಳಿಂದ ಉಂಟಾಗುವ ಕಷ್ಟಗಳನ್ನು ದೂರ ಮಾಡಲು ಮಾಡುವ ದಿವ್ಯ ಪ್ರಕ್ರಿಯೆಯಾಗಿದೆ. ಈ ಜಿಲ್ಲೆಗಳಲ್ಲಿ ಇಂದು  ಭಾರೀ ಮಳೆ: ಶಾಲಾ ಕಾಲೇಜುಗಳಿಗೆ ರಜೆಶಿಕ್ಷಣ ಮಂತ್ರಿ ಧರ್ಮೆಂದ್ರ ಪ್ರಧಾನ್ ರಾಜಿನಾಮೆಗೆ ಒತ್ತಾಯಿಸಿ ವಕೀಲರಿಂದ ಪ್ರತಿಭಟನೆಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ: ರೈತ ಸಂಘದವರಿಂದ ಪ್ರತಿಭಟನೆಬಿಜೆಪಿ ಯಿಂದ ಕಾಂಗ್ರೆಸ್ ಗೂಂಡಾ ವರ್ತನೆ ವಿರುದ್ದ ಧಿಕ್ಕಾರ.!ಹಿರಿಯೂರು ಉಪ ಚುನಾವಣೆ: ಸಿ.ಶಿವುಯಾದವ್ ಗೆ ಕಾಂಗ್ರೆಸ್ ಟಿಕೆಟ್ ನೀಡಿ.!