ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಮತ್ತಷ್ಟು ಚುರುಕು ಪಡೆದಿದ್ದು, ವಿವಿಧ ಕಡೆ ಅ. 29ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಇನ್ನೂ 2 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಯಲ್ಲೋ ಅಲರ್ಟ್ ಘೋಷಿಸಿದೆ. ನಾಳೆ ದ. ಕನ್ನಡ, ಉಡುಪಿ ಹಾಗೂ ಉ. ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ವಿಜಯನಗರ, ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಇತರೆ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು IMD ಸೂಚಿಸಿದೆ.