ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ: ಶಾಲೆ, ಪಿಯು ಕಾಲೇಜುಗಳಿಗೆ ರಜೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಆಗಸ್ಟ್ 8ರಂದು ಶನಿವಾರ 4 ತಾಲೂಕುಗಳಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಹವಾಮಾನ ಮುನ್ಸೂಚನೆಯಂತೆ ಪುತ್ತೂರು ಉಪವಿಭಾಗದ ಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.
1. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದ ತಹಶೀಲ್ದಾರರ ಮನವಿ ಪ್ರಕಾರವಾಗಿ ಪುತ್ತೂರು ತಾಲೂಕು, ಬೆಳ್ತಂಗಡಿ ತಾಲೂಕು, ಸುಳ್ಯ ತಾಲೂಕು, ಕಡಬ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಮತ್ತು ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ & ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜು, ಎಲ್ಲಾ ITI ಮತ್ತು Diploma ಕಾಲೇಜುಗಳು 12 ನೇ ತರಗತಿ (ಎಲ್ಲಾ ವಸತಿ ಶಾಲಾ ಕಾಲೇಜುಗಳೂ ಸೇರಿದಂತೆ) ಗಳಿಗೆ ದಿನಾಂಕ 08.08.2026 ರಂದು ರಜೆಯನ್ನು ಘೋಷಿಸಲಾಗಿದೆ ಹಾಗೂ ಇದನ್ನು ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, 2005 ರ ಪ್ರಕಾರ ನಿಯಾಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು