ಹಾಸನ: ಅ. 29 ರಿಂದ ನ. 11ರವರೆಗೆ ನಡೆಯಲಿರುವ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ತೆರಳುವ ಭಕ್ತರ ಅನುಕೂಲಕ್ಕಾಗಿ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.
ಹಾಸನ-ಬೆಂಗಳೂರು ಹಾಗೂ ಹಾಸನ-ಅರಸೀಕೆರೆ ನಡುವೆ 2 ವಿಶೇಷ ರೈಲುಗಳು ಸಂಚರಿಸಲಿವೆ. ಜೊತೆಗೆ, ಬೆಂಗಳೂರು, ಮೈಸೂರು, ಮಡಿಕೇರಿ ಸೇರಿದಂತೆ ವಿವಿಧ ಮಾರ್ಗಗಳಲ್ಲಿ 200ಕ್ಕೂ ಹೆಚ್ಚು ವಿಶೇಷ ಬಸ್‌ಗಳನ್ನು ನಿಯೋಜಿಸಲಾಗಿದೆ.
ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ರೈಲ್ವೆ ಇಲಾಖೆ, ಸಾರಿಗೆ ಇಲಾಖೆ & ಜಿಲ್ಲಾಡಳಿತ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿವೆ.