LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಗೃಹಲಕ್ಷ್ಮಿ ಹಣ ಪಡೆಯುವ ಮಹಿಳೆಯರು ಓದ ಬೇಕಾದ ಸುದ್ದಿ.!

ಗೃಹಲಕ್ಷ್ಮಿ ಹಣ ಪಡೆಯುವ ಮಹಿಳೆಯರು ಓದ ಬೇಕಾದ ಸುದ್ದಿ.!

 

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯಡಿ ನಕಲಿ ಮತ್ತು ಅನರ್ಹ ಫಲಾನುಭವಿಗಳನ್ನು ತಡೆಗಟ್ಟುವ ಉದ್ದೇಶದಿಂದ ಮನೆಯ ಯಜಮಾನಿ ಹೆಸರಿನಲ್ಲೇ ಸಿಮ್ ಕಾರ್ಡ್ ಹೊಂದುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.

ಮದ್ದೂರು ತಾಲೂಕಿನ ಕೊಪ್ಪದಲ್ಲಿ ಮಾತನಾಡಿದ ಅವರು, ಶೀಘ್ರದಲ್ಲೇ ಯೋಜನೆಯ 33ನೇ ಕಂತಿನ ಒಟ್ಟು 2,480 ಕೋಟಿ ರೂಪಾಯಿ ಅನುದಾನವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಬಿಡುಗಡೆ ಮಾಡಲಾಗುವುದು ಎಂದು ಪ್ರಕಟಿಸಿದರು.

ಅನರ್ಹರ ತಡೆಗೆ 'ಸ್ವಂತ ಸಿಮ್' ಕಡ್ಡಾಯ ನಿಯಮ: ಸರ್ಕಾರದ ಯೋಜನೆಗಳು ಕೇವಲ ಕರ್ನಾಟಕದ ನೈಜ ಫಲಾನುಭವಿಗಳಿಗೆ ಮಾತ್ರ ತಲುಪಬೇಕು ಹಾಗೂ ಅಕ್ರಮಗಳನ್ನು ತಡೆಯಬೇಕು ಎಂಬ ಕಾರಣದಿಂದ ಸಿಮ್ ಕಾರ್ಡ್ ನಿಯಮವನ್ನು ಜಾರಿಗೆ ತರಲಾಗಿದೆ. ಸರ್ಕಾರದ ನೂತನ ಮಾನದಂಡದಂತೆ, ಗೃಹಲಕ್ಷ್ಮಿ ಯೋಜನೆಯ ಮಾಸಿಕ ಹಣ ಪಡೆಯಲು ಮನೆಯ ಯಜಮಾನಿಯೇ ತನ್ನ ಹೆಸರಿನಲ್ಲಿ ಸಿಮ್ ಕಾರ್ಡ್ ಪಡೆದು ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ. ಈ ಸುಧಾರಣಾ ಕ್ರಮಗಳಿಂದಾಗಿ ಪ್ರಸ್ತುತ 1 ಕೋಟಿ 24 ಲಕ್ಷ ನೈಜ ಫಲಾನುಭವಿಗಳಿಗೆ ವ್ಯವಸ್ಥಿತವಾಗಿ ಹಣ ತಲುಪುತ್ತಿದ್ದು, ಆಗಸ್ಟ್‌ವರೆಗಿನ ಕಂತುಗಳು ಪಾವತಿಯಾಗಿವೆ. ಇದೀಗ 33ನೇ ಕಂತಿನ ₹2,480 ಕೋಟಿ ಹಣವನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಮಹಿಳೆಯರ ಖಾತೆಗಳಿಗೆ ಹಣ ಜಮೆಯಾಗಲಿದೆ ಎಂದು ದಿನೇಶ್ ಗೂಳಿಗೌಡ ವಿವರಿಸಿದರು.

 

 

 

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗುರು-ಶಿಷ್ಯ ಭಾಂದವ್ಯ ಸುಖಿ ಸಮಾಜದ ಹೆಗ್ಗುರುತು: ಎನ್.ಎಂ ರಮೇಶ್ಪ್ರೀತಿ-ಪ್ರೇಮ ವಿಚಾರದಲ್ಲಿ ಜಯ ಸಿದ್ಧಿ ಆಗಬೇಕಾದರೆ ಇದೊಂದು ತಂತ್ರ ಮಾಡಿಗೃಹಲಕ್ಷ್ಮಿ ಹಣ ಪಡೆಯುವ ಮಹಿಳೆಯರು ಓದ ಬೇಕಾದ ಸುದ್ದಿ.!ಹೈಕೋರ್ಟ್‌ನಿಂದ ಮಹತ್ವದ ಆದೇಶ: ಸಾಲದ ಹಣ ಬಾಕಿ ಇದೆ ಎಂಬ ಕಾರಣಕ್ಕೆ ಗ್ರಾಹಕರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುವಂತಿಲ್ಲ..!ದಾವಣಗೆರೆ ಜಿಲ್ಲೆಗೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ: ತೀವ್ರ ಮಳೆ  ಕೊರತೆ,  ಬೇಳೆ ಹಾನಿ ನಿಖರ ಅಂಶಗಳ ಮಾಹಿತಿ.!ವಿವಿಧ ಹೋಟೆಲ್, ಜ್ಯೂಸ್ ಅಂಗಡಿಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಿಢೀರ್ ದಾಳಿ..!ಕೇಂದ್ರ ಬರ ಅಧ್ಯಯನ ತಂಡ ಭೇಟಿ : ಭೀಕರ ಕ್ಷಾಮದ ದರ್ಶನ..!ವಚನ: -ಷಣ್ಮುಖಸ್ವಾಮಿದಿನದ ಮಂಡಕ್ಕಿ ಒಗ್ಗಣೆ ಮಿರ್ಚಿ 04-10-2026ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ.!