ಬೆಂಗಳೂರು: ಗೃಹ ಜ್ಯೋತಿ ಫಲಾನುಭವಿಗಳ ಮನೆ-ಮನೆ ಸಮೀಕ್ಷೆಗೆ ರಾಜ್ಯ ಸರ್ಕಾರ ನೀಡಿರುವ ಗಡುವು ಅ.31ಕ್ಕೆ ಮುಕ್ತಾಯಗೊಳ್ಳುತ್ತಿದೆ.
ಈ ಸಮೀಕ್ಷೆಯಲ್ಲಿ ಪಾಲ್ಗೊಳ್ಳದ ಗ್ರಾಹಕರು ಅಗತ್ಯ ದಾಖಲಾತಿಗಳನ್ನು ಅ. 31ರೊಳಗೆ ಬೆಸ್ಕಾಂ ಉಪ ವಿಭಾಗ ಕಚೇರಿಗೆ ಖುದ್ದಾಗಿ ತೆರಳಿ ಸಲ್ಲಿಸಲು ಬೆಸ್ಕಾಂ ವಿನಂತಿಸಿದೆ. ಕಳೆದ ಈ ಸಮೀಕ್ಷೆಯಲ್ಲಿ ಮನೆಗೆ ಬೀಗ ಹಾಕಿರುವ, ಮನೆ ಖಾಲಿ ಇರುವ ಹಾಗೂ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದ ಗ್ರಾಹಕರಿಗೆ ಬೆಸ್ಕಾಂ ಕಚೇರಿಗೆ ತೆರಳಿ ದಾಖಲಾತಿ ಸಲ್ಲಿಸಲು ಸರ್ಕಾರ ಅವಕಾಶ ಕಲ್ಪಿಸಿದೆ.