ಮಳೆಯ ಅಬ್ಬ ರ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ: ಈ ಜಿಲ್ಲೆಯಲ್ಲಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಇಂದು (ಅ. 4) ರಂದು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ ಹಾಗೂ ಉಳ್ಳಾಲ ತಾಲೂಕುಗಳ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ/ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳು (12ನೇ ತರಗತಿವರೆಗೆ), ITI ಹಾಗೂ ಡಿಪ್ಲೊಮಾ ಕಾಲೇಜುಗಳು / ವಸತಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.