ಬೆಂಗಳೂರು: ಕಾವೇರಿ ಕೊಳ್ಳದಲ್ಲಿ ಪ್ರತಿಭಟನೆ ಕಿಚ್ಚು ಧಗಧಗಿಸಲು ಶುರುವಾಗಿದೆ. ಈ ನಡುವೆ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಅಬ್ಬರ ಕೂಡ ಜೋರಾಗಿದೆ. ಕೊಡಗು ಜಿಲ್ಲೆಯಲ್ಲಿ ಮುಂದುವರೆದ ಗಾಳಿ ಮಳೆ ಹಿನ್ನೆಲೆ ನಾಳೆ ಸೋಮವಾರಪೇಟೆ ತಾಲ್ಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಹಾಗೂ ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ನಾಳೆ ಜಿಲ್ಲೆಯಾದ್ಯಂತ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ H.V ದರ್ಶನ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಪದವಿ ಪೂರ್ವ, ಡಿಪ್ಲೋಮಾ ಮತ್ತು ಐಟಿಐ ಹಾಗೂ ಎಲ್ಲಾ ವಸತಿ ಶಾಲಾ- ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ.