ಉಡುಪಿ: ಬ್ರಹ್ಮಾವರದ ಬಾಳೆಕುದ್ರು ಮಠದ ಶ್ರೀ ವಾಸುದೇವ ಸದಾಶಿವಾಶ್ರಮ ಸ್ವಾಮೀಜಿ ಆರು ಪುರಾತನ ವಿಗ್ರಹಗಳನ್ನು ಮಾರಾಟ ಮಾಡಿದ ಆರೋಪದ ಹಿನ್ನೆಲೆಯಲ್ಲಿ ನಾಪತ್ತೆಯಾಗಿದ್ದಾರೆ.
ನರಸಿಂಹದೇವರು, ಗಣಪತಿ, ಮಹಿಷಮರ್ದಿನಿ ಸೇರಿದಂತೆ ವಿಗ್ರಹಗಳು ಕಾಣೆಯಾಗಿವೆ. ಹಳೆಯ ಮೂರ್ತಿಗಳನ್ನು ವಿಸರ್ಜಿಸಿರುವುದಾಗಿ ಸ್ವಾಮೀಜಿ ತಿಳಿಸಿದ್ದರು.
ಆದರೆ, ವೆಬ್ಸೈಟ್ನಲ್ಲಿ ಮಾರಾಟಕ್ಕೆ ಪ್ರದರ್ಶಿಸಿರುವುದು ಬೆಳಕಿಗೆ ಬಂದಿದೆ. ಶಿಷ್ಯ ಜಗದೀಶ್ ಐತಾಳ್ ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.!