ನವದೆಹಲಿ : ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ವಿರುದ್ಧ ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣ ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ ಅರ್ಜಿಯ ವಿಚಾರಣೆ ಇಂದು ನಡೆಯಿತು.
ನ್ಯಾಯಮೂರ್ತಿ ಎಂ. ಎಂ. ಸುಂದರೇಶ್ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಯಿತು. ವಿಚಾರಣೆ ಬಳಿಕ ಸುಪ್ರೀಂ ಕೋರ್ಟ್ ಲೋಕಾಯುಕ್ತಕ್ಕೆ ನೋಟಿಸ್ ನೀಡಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಶ್ವರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ವೇಳೆ ಹೈ ಕೋರ್ಟ್ ಕೆಎಸ್ ಈಶ್ವರಪ್ಪ ಅರ್ಜಿಯನ್ನು ಮಜಾಗೊಳಿಸಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಈಶ್ವರಪ್ಪ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇಂದು ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ್ದು, ಸುಪ್ರೀಂಕೋರ್ಟ್ ಲೋಕಾಯುಕ್ತಕ್ಕೆ ನೋಟಿಸ್ ನೀಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡುವಂತೆ ಸೂಚನೆ ನೀಡಿದೆ.