LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಐಎಎಸ್ ಅಧಿಕಾರಿ ಬಂಧನ.!

ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಐಎಎಸ್ ಅಧಿಕಾರಿ ಬಂಧನ.!

 

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಹಗರಣಕ್ಕೆ ಸಂಬಂಧಿಸಿದಂತೆ ಎರಡು ದಿನದ ವಿಚಾರಣೆಯ ಬಳಿಕ ಐಎಎಸ್ ಅಧಿಕಾರಿ ಜ್ಞಾನೇಂದ್ರಕುಮಾರ್ ಅವರನ್ನು ಬಂಧಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಅಸಹಕಾರ ತೋರಿದ ಹಿನ್ನೆಲೆಯಲ್ಲಿ ಜ್ಞಾನೇಂದ್ರಕುಮಾರ್ ಅವರನ್ನು ಸಿಐಡಿ ಬಂಧಿಸಿದೆ. 2 ದಿನ ಗಂಟೆಗಳ ಕಾಲ ಸಿಐಡಿ ಅಧಿಕಾರಿಗಳು ಜ್ಞಾನೇಂದ್ರ ಕುಮಾರ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು.

ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಎರಡು ದಿನಗಳಿಂದ ಜ್ಞಾನೇಂದ್ರ ಕುಮಾರ್ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿತ್ತು. ಸಿಐಡಿ ಅಧಿಕಾರಿ ರಾಘವೇಂದ್ರ ಹೆಗಡೆ ವಿಚಾರಣೆ ನಡೆಸಿದ್ದರು

10 ದಿನಗಳಿಂದ ಮೊಬೈಲ್‌ ಸ್ವಿಚ್ಡ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದ ಜ್ಞಾನೇಂದ್ರ ಕುಮಾರ್‌ ಶುಕ್ರವಾರ ಏಕಾಏಕಿ ಸಿಐಡಿ ಕಚೇರಿಯಲ್ಲಿ ಪ್ರತ್ಯಕ್ಷವಾಗಿದ್ದು, ವಿಚಾರಣೆ ಎದುರಿಸಿದರು. ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಜ್ಞಾನೇಂದ್ರ ಕುಮಾರ್ ಗುರುವಾರವೇ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ, ಗೈರಾಗಿದ್ದರು. ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಎಂಟ್ರಿಯಾಗುತ್ತಿದ್ದಂತೆ ಆಗಸ್ಟ್​ 18ರಿಂದ ಜ್ಞಾನೇಂದ್ರ ಕುಮಾರ್‌ ನಾಪತ್ತೆಯಾಗಿದ್ದರು. ಪಶುವೈದ್ಯಾಧಿಕಾರಿಗಳ ಪರೀಕ್ಷೆ ನಡೆದಾಗ ಜ್ಞಾನೇಂದ್ರ ಕುಮಾರ್ ಆಯೋಗದ ಪರೀಕ್ಷಾ ನಿಯಂತ್ರಕರಾಗಿದ್ದರು. ಈ ವೇಳೆ ಪರೀಕ್ಷೆಯಲ್ಲಿ ಭಾರಿ ಅಕ್ರಮ ನಡೆದಿತ್ತು. ಆದ್ದರಿಂದ ಅಕ್ರಮದಲ್ಲಿ ಇವರ ಹೆಸರು ಕೇಳಿಬಂದಿತ್ತು. ಜತೆಗೆ ಪ್ರಾಥಮಿಕ ತನಿಖೆಯಲ್ಲಿ ಉದ್ದೇಶಪೂರ್ವಕವಾಗಿ ಕೆಲವೊಂದು ಲೋಪದೋಷಗಳನ್ನು ಎಸಗಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಈ ಶಕ್ತಿಶಾಲಿ ಯಂತ್ರದ ಸಹಾಯದಿಂದ ಪ್ರೀತಿಸಿದ ವ್ಯಕ್ತಿಗಳ ಮನಸ್ಸನ್ನು ಪರಿವರ್ತಿಸಿ ನಿಮ್ಮಂತೆ ಮಾಡಿಕೊಳ್ಳಬಹುದು.!ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಐಎಎಸ್ ಅಧಿಕಾರಿ ಬಂಧನ.!ವಿದ್ಯಾರ್ಥಿನಿಯರಲ್ಲಿ ವಿವೇಚನೆ, ವೈಜ್ಞಾನಿಕ ಚಿಂತನೆ ಮುಖ್ಯ: ಜಿ.ಎನ್.ಮಲ್ಲಿಕಾರ್ಜುನಪ್ಪತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ: ಕ್ರೀಡಾಪಟುಗಳಿಗೆ ಆನ್‍ಲೈನ್ ನೋಂದಣಿ ಕಡ್ಡಾಯದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 30-08-2026ವಚನ.:  -ಘಟ್ಟಿವಾಳಯ್ಯಮಾಟ ಮಂತ್ರ ವಶೀಕರಣ ಎಂದರೇನು ಈ ಸಮಸ್ಯೆಗಳಿಂದ ಹೊರಬರಲು ತಪ್ಪದೇ ಈ ಕೆಲಸ ಮಾಡಿ.ಟಾಕ್ಸಿಕ್  ಸಿನಿಮದ ಬಗ್ಗೆ ನಟ ಕಿಚ್ಚ ಸುದೀಪ್ ಸಾಮಾಜಿಕ ಜಾಲತಾಣದಲ್ಲಿ ಏನು ಹಂಚಿಕೊಂಡಿದ್ದಾರೆ.?ವಿವಿಧ ಸಾಮಾಜಿಕ ಕ್ಷೇತ್ರಗಳಲ್ಲಿ ಎಬಿವಿಪಿಯಿಂದ ರಕ್ಷಾಬಂಧನ ಆಚರಣೆಫುಟ್‌ಪಾತ್‌ ಒತ್ತುವರಿ ತೆರವು ಅಭಿಯಾನಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ