LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಕ್ಯಾರಿ ಬ್ಯಾಗ್‌ಗೆ ಹೆಚ್ಚುವರಿ ಶುಲ್ಕ ವಿಧಿಸಿದ ಜುಡಿಯೊ ಮಳಿಗೆಗೆ ₹30,000 ದಂಡ.!

ಕ್ಯಾರಿ ಬ್ಯಾಗ್‌ಗೆ ಹೆಚ್ಚುವರಿ ಶುಲ್ಕ ವಿಧಿಸಿದ ಜುಡಿಯೊ ಮಳಿಗೆಗೆ ₹30,000 ದಂಡ.!

 

ದಾವಣಗೆರೆ : ಗ್ರಾಹಕರಿಂದ ಕ್ಯಾರಿ ಬ್ಯಾಗ್‌ಗೆ ಹೆಚ್ಚುವರಿಯಾಗಿ ದಂಡ ಅಥವಾ ಶುಲ್ಕ ವಸೂಲಿ ಮಾಡುವುದು ಅನ್ಯಾಯದ ವ್ಯಾಪಾರ ಹಾಗೂ ಸೇವೆಯಲ್ಲಾದ ನಿರ್ಲಕ್ಷ್ಯ ಎಂದು ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮಹತ್ವದ ತೀರ್ಪು ನೀಡಿದೆ.

ಪಿ.ಜೆ. ಬಡಾವಣೆಯ ಎವಿಕೆ ರಸ್ತೆಯಲ್ಲಿರುವ ಜುಡಿಯೊ (ತೋಶಾನಿ ಎಂಪೋರಿಯಂ ಅವೆನ್ಯೂ) ಮಳಿಗೆಯಲ್ಲಿ ಬಟ್ಟೆ ಖರೀದಿಸಿದ್ದ ದೂರುದಾರರಾದ ಶ್ರೀ ರಾಜೇಂದ್ರ S/o ಎಸ್.ಕೆ. ಬಸವರಾಜ್ ಅವರಿಂದ ಕ್ಯಾರಿ ಬ್ಯಾಗ್‌ಗಾಗಿ ಹೆಚ್ಚುವರಿಯಾಗಿ ರೂ. 10/- ವಸೂಲಿ ಮಾಡಿದ್ದಕ್ಕಾಗಿ ಆಯೋಗವು ಈ ಆದೇಶ ಹೊರಡಿಸಿದೆ.

ಪ್ರಕರಣದ ವಿವರ: ದೂರುದಾರರು ಜುಡಿಯೊ ಮಳಿಗೆಯಲ್ಲಿ ಬಟ್ಟೆಗಳನ್ನು ಖರೀದಿಸಿದಾಗ, ಅವುಗಳನ್ನು ಒಯ್ಯಲು ಕ್ಯಾರಿ ಬ್ಯಾಗ್ ನೀಡಲು ಮಳಿಗೆಯವರು ಹೆಚ್ಚುವರಿಯಾಗಿ ರೂ. 10/- ಶುಲ್ಕ ಪಡೆದಿದ್ದರು. ಇದರಿಂದ ನೊಂದ ಗ್ರಾಹಕರು ಅನ್ಯಾಯದ ವ್ಯಾಪಾರ ಪದ್ಧತಿ ಹಾಗೂ ಸೇವೆಯಲ್ಲಿನ ಕೊರತೆಯನ್ನು ಪ್ರಶ್ನಿಸಿ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು. ದೂರನ್ನು ಕೂಲಂಕುಷವಾಗಿ ಪರಿಶೀಲಿಸಿದ ಆಯೋಗವು, ಗ್ರಾಹಕರಿಂದ ಕ್ಯಾರಿ ಬ್ಯಾಗ್ ಶುಲ್ಕ ವಸೂಲಿ ಮಾಡುವುದು ಕಾನೂನುಬಾಹಿರ ಹಾಗೂ ಸೇವಾ ಲೋಪ ಎಂದು ಸ್ಪಷ್ಟಪಡಿಸಿದೆ.

ಸೇವೆಯಲ್ಲಾದ ನಿರ್ಲಕ್ಷ್ಯ, ಅನ್ಯಾಯದ ವ್ಯಾಪಾರ ಮತ್ತು ದೂರಿನ ಖರ್ಚು ಸೇರಿ ದೂರುದಾರರಿಗೆ ಒಟ್ಟು ರೂ. 10,000/- ಗಳ ಪರಿಹಾರ ಹಾಗೂ ಪಾವತಿಸಿದ್ದ ರೂ. 10/- ಅನ್ನು ಹಿಂತಿರುಗಿಸುವಂತೆ ಜುಡಿಯೊ ಸಂಸ್ಥೆಗೆ ಆದೇಶಿಸಲಾಗಿದೆ. ಇದರೊಂದಿಗೆ, ಗ್ರಾಹಕ ಕಾನೂನು ನೆರವು ಖಾತೆಗೆ ರೂ. 20,000/- ಜಮಾ ಮಾಡಲು ಸೂಚಿಸಲಾಗಿದ್ದು, ಒಟ್ಟು ರೂ. 30,000/- ಗಳ ಮೊತ್ತವನ್ನು ಆದೇಶದ ದಿನಾಂಕದಿಂದ ಒಂದು ತಿಂಗಳೊಳಗೆ ಪಾವತಿಸಲು ಆದೇಶಿಸಲಾಗಿದೆ.

ಎಲ್ಲಾ ಮಳಿಗೆಗಳಿಗೂ ಆದೇಶ ಅನ್ವಯ:

ಉತ್ಪನ್ನಗಳನ್ನು ಖರೀದಿಸುವ ಎಲ್ಲಾ ಗ್ರಾಹಕರಿಗೆ ಉಚಿತವಾಗಿ ಕ್ಯಾರಿ ಬ್ಯಾಗ್‌ಗಳನ್ನು ಒದಗಿಸುವುದು ಕಡ್ಡಾಯವಾಗಿದೆ. ಈ ಆದೇಶವು ಕೇವಲ ಸದರಿ ಮಳಿಗೆಗೆ ಮಾತ್ರವಲ್ಲದೆ ಎಲ್ಲಾ ಸಗಟು ವ್ಯಾಪಾರಿಗಳು, ರಿಟೇಲ್ ಮಾರಾಟಗಾರರು, ದೊಡ್ಡ ಮಾಲ್‌ಗಳು, ಮೋರ್, ರಿಲಯನ್ಸ್, ಟ್ರೆಂಡ್ಸ್ ಹಾಗೂ ಇನ್ನಿತರ ಎಲ್ಲಾ ಮಾರಾಟ ಮಳಿಗೆಗಳಿಗೂ ಅನ್ವಯಿಸುತ್ತದೆ ಎಂದು ಆಯೋಗ ತಿಳಿಸಿದೆ.

ಈ ಮಹತ್ವದ ಆದೇಶವನ್ನು ದಾವಣಗೆರೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಕುಮಾರಿ ಹೆಚ್.ಎನ್. ಮೀನಾ ಹಾಗೂ ಸದಸ್ಯರಾದ ಶ್ರೀ ಸಿ.ಎಸ್. ತ್ಯಾಗರಾಜನ್ ಅವರನ್ನೊಳಗೊಂಡ ಪೀಠವು ಹೊರಡಿಸಿದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ರಿಜಿಸ್ಟ್ರಾರ್ ಹಾಗೂ ಸಹಾಯಕ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.

(AI ಚಿತ್ರ)

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರತ್ಯಕ್ಷವಾಗಿ ಪರೋಕ್ಷವಾಗಿ ಮಾಟಮಂತ್ರದಂತಹ ಸಮಸ್ಯೆಗೆ ಒಳಗಾಗಿದ್ದರೆ ಶಕ್ತಿಶಾಲಿ ಬೇರಿನಿಂದ ಸರಳ ಪ್ರಯೋಗ ಮಾಡಿ ಪರಿಹಾರ ಸಿಗುತ್ತದೆ!ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೆ –ಸೆಟ್ ವೇಳಾಪಟ್ಟಿ ಬಿಡುಗಡೆ.!ಚಿತ್ರದುರ್ಗ: ಇಂದು ಆ. 11ರಂದು ಸಿಎಂ ಜೊತೆ ಸರ್ಕಾರಿ ನೌಕರರ ಸಂವಾದ.!ಕ್ಯಾರಿ ಬ್ಯಾಗ್‌ಗೆ ಹೆಚ್ಚುವರಿ ಶುಲ್ಕ ವಿಧಿಸಿದ ಜುಡಿಯೊ ಮಳಿಗೆಗೆ ₹30,000 ದಂಡ.!ಯಾಂತ್ರಿಕ ಬದುಕಿಗೆ ಕಲೆ, ಸಾಹಿತ್ಯ, ಸಂಗೀತ ಮನಸ್ಸಿಗೆ ನೆಮ್ಮದಿ.!ಬಹುರಾಷ್ಟ್ರೀಯ ಕಂಪನಿಗಳನ್ನು ಭಾರತದಿಂದ ತೊಲಗಿಸಿ: ಪ್ರತಿಭಟನೆ.!11-08-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ-ಅಕ್ಕಮಹಾದೇವಿ  ಅವರ ವಚನಈ 3 ಶತ್ರುಗಳು ನಿಮ್ಮ ಮನೆಯಲ್ಲಿದ್ದಾರೆ, ಸಮಯಕ್ಕೆ ಸರಿಯಾಗಿ ಗುರುತಿಸದಿದ್ರೆ ಲೈಫೇ ಬರ್ಬಾದ್‌ ಆಗುತ್ತೆ!ಕನ್ನಡ ಮಾಧ್ಯಮದಲ್ಲಿ ಓದಿದವರು ದಡ್ಡರಲ್ಲ : ಡಾ.ಎಲ್.ಪಾಲಾಕ್ಷಯ್ಯ