LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಕಾಮಗೇತಿ ಇಮ್ಮಡಿ ಚಿಕ್ಕಣ್ಣ ನಾಯಕರ ಆಡಳಿತಾವಧಿಯ ಲಿಪಿಗಲ್ಲು

ಕಾಮಗೇತಿ ಇಮ್ಮಡಿ ಚಿಕ್ಕಣ್ಣ ನಾಯಕರ ಆಡಳಿತಾವಧಿಯ ಲಿಪಿಗಲ್ಲು

ಕಾಮಗೇತಿ ಇಮ್ಮಡಿ ಚಿಕ್ಕಣ್ಣ ನಾಯಕರ ಆಡಳಿತಾವಧಿಯ ಲಿಪಿಗಲ್ಲು

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿ ಗ್ರಾಮದ ಕೆರೆಯ ಪಕ್ಕದ ಹೊಲವೊಂದರಲ್ಲಿ ಉಳುಮೆ ಮಾಡುವಾಗ ಚಿತ್ರದುರ್ಗದ ಪಾಳೇಗಾರ ಅರಸರ ಕಾಲಘಟ್ಟಕ್ಕೆ ಸೇರಿದ ಶಾಸನವೊಂದು ಪತ್ತೆಯಾಗಿದೆ. ಪ್ರಸ್ತುತ ಶಾಸನವನ್ನು ಚಿತ್ರದುರ್ಗದ ರಂಗಯ್ಯನ ಬಾಗಿಲಿನಲ್ಲಿರುವ ಸರ್ಕಾರಿ ವಸ್ತುಸಂಗ್ರಹಾಲಯಕ್ಕೆ ಹಸ್ತಾಂತರಿಸಲಾಗಿದೆ.

ಕರಿಕಲ್ಲಿನಲ್ಲಿ ಕೆತ್ತಲಾದ ಶಾಸನವು ಒಟ್ಟು 17 ಸಾಲುಗಳನ್ನು ಒಳಗೊಂಡಿದ್ದು, ಕನ್ನಡ ಲಿಪಿ ಹಾಗೂ ಭಾμÉಯಲ್ಲಿದೆ. ಕಾಮಗೇತಿ ಇಮ್ಮಡಿ ಚಿಕ್ಕಣ್ಣ ನಾಯಕರ (ಕ್ರಿ.. 1575-1586) ಆಳ್ವಿಕೆಯ ಅವಧಿಯಲ್ಲಿ ಇದು ರಚನೆಯಾಗಿದೆ ಎಂದು ಗುರುತಿಸಲಾಗಿದೆ.

ಕಾಮಗೇತಿ ಇಮ್ಮಡಿ ಚಿಕ್ಕಣ್ಣ ಅರಸನ ಅಧೀನ ಅಧಿಕಾರಿಯಾಗಿದ್ದ ಲಕ್ಕಜೀಯನ ಮಗ ದೊಡ್ಡಗೌಡ ಎಂಬುವವರು ಜವಗೊಂಡನಹಳ್ಳಿಯಲ್ಲಿ ಜನೋಪಕಾರಕ್ಕಾಗಿ ಕೆರೆಯೊಂದನ್ನು ಕಟ್ಟಿಸಿದ್ದರು. ಕಾರ್ಯಕ್ಕೆ ಮೆಚ್ಚಿದ ಅರಸರು ದೊಡ್ಡಗೌಡನಿಗೆಉಂಬಳಿ ಭೂಮಿ'ಯನ್ನು ಕೊಡುಗೆಯಾಗಿ ನೀಡಿರುವುದೇ ಶಾಸನದ ಮುಖ್ಯ ವಿಷಯವಾಗಿದೆ.

ಲಿಪಿಕಾರ ಅಥವಾ ಖಂಡರಣೆಕಾರನ ಪ್ರಮಾದದಿಂದಾಗಿ ಶಾಸನದಲ್ಲಿ ಅಲ್ಲಲ್ಲಿ ವ್ಯಾಕರಣ ದೋಷಗಳು ನುಸುಳಿವೆ. ‘ಕಾರ್ತಿಕ ಶುದ್ಧ 10 ಗುರುವಾರ'ದಂದು ಇದು ರಚನೆಯಾಗಿದ್ದು, ಶಕವರ್ಷ ಹಾಗೂ ಸಂವತ್ಸರವನ್ನು ಗುರುತಿಸುವ ಅಕ್ಷರಗಳು ಅಸ್ಪಷ್ಟವಾಗಿವೆ.

ಶಾಸನದ ಕೊನೆಯಲ್ಲಿಶಾಪಾಶಯವಿದ್ದು, ದಾನ ಭೂಮಿಯನ್ನು ದೊಡ್ಡಗೌಡರ ಕುಟುಂಬದವರು ಸೂರ್ಯ-ಚಂದ್ರರಿರುವವರೆಗೂ ಸುಖವಾಗಿ ಅನುಭವಿಸತಕ್ಕದ್ದು. ಯಾರಾದರೂ ಭೂಮಿಯನ್ನು ಅಪಹರಿಸಿದರೆ ಕಾಶಿಯಲ್ಲಿ ಆಕಳನ್ನು ಕೊಂದ ಪಾಪಕ್ಕೆ ಈಡಾಗುವರು ಎಂದು ಎಚ್ಚರಿಸಲಾಗಿದೆ. ಶಾಸನವು ಅಲ್ಲಲ್ಲಿ ತ್ರುಟಿತವಾಗಿದ್ದು, ಇನ್ನಷ್ಟು ಹೆಚ್ಚಿನ ಅಧ್ಯಯನದ ಅಗತ್ಯವಿದೆ.

ಶಾಸನ ದೊರೆತ ಸ್ಥಳಕ್ಕೆ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಸಹಾಯಕ ನಿರ್ದೇಶಕ ಜಿ. ಪ್ರಹ್ಲಾದ್ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು. ಶಾಸನವನ್ನು ಓದಿ ವಿಶ್ಲೇಷಿಸಲು ಡಾ. ರವಿಕುಮಾರ ಕೆ. ನವಲಗುಂದ ಸಹಕರಿಸಿದ್ದಾರೆ.

  ಸಂದರ್ಭದಲ್ಲಿ ಜವನಗೊಂಡನಹಳ್ಳಿ ಗ್ರಾಮ ಪಂಚಾಯತಿ ಪಿಡಿಒ ಮಹಾಂತೇಶ್, ಗ್ರಾಮದ ಮುಖಂಡರಾದ ಜಿ. ಹನುಮಂತೇಗೌಡ, ಕೆ.ಎಚ್. ಚಿತ್ರಲಿಂಗಪ್ಪ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

 

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST