ದಾವಣಗೆರೆ: ದಾವಣಗೆರೆ ಜಿಲ್ಲಾದ್ಯಂತ ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ ಸಾರ್ವಜನಿಕ ಆಚರಣೆಯಲ್ಲಿ ಯಾವುದೇ ತರಹದ ಅಹಿತಕರ ಘಟನೆಗಳು ಸಂಭವಿಸದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಕರ್ನಾಟಕ ಅಬಕಾರಿ ಕಾಯ್ದೆ-1965ರ ಕಲಂ 21(1)ರಂತೆ ದಾವಣಗೆರೆ ಜಿಲ್ಲಾದ್ಯಂತ (ಹರಿಹರ ನಗರ ವ್ಯಾಪ್ತಿಯ ಕೆ.ಎಸ್.ಬಿ.ಸಿ.ಎಲ್ ಡಿಪೋ ಹೊರತುಪಡಿಸಿ) ಬೆಳಿಗ್ಗೆ 6.00 ಗಂಟೆಯಿಂದ ರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟ ಹಾಗೂ ಸರಬರಾಜನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಆದೇಶಿಸಿದ್ದಾರೆ.