ಬೆಂಗಳೂರು: ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದಿದ್ದು, ಭ್ರಷ್ಟ ಅಧಿಕಾರಿಗಳಲ್ಲಿ ಆತಂಕ ಮೂಡಿದೆ. ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯ ಮುಂದುವರಿದಿದೆ.
ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳಲ್ಲಿ ಲೋಕಾಯುಕ್ತ ತಂಡಗಳು ದಾಖಲೆಗಳನ್ನು ಪರಿಶೀಲಿಸುತ್ತಿವೆ. ಇಂತಹ ದಾಳಿಗಳ ವೇಳೆ ಅಕ್ರಮ ಆಸ್ತಿ, ನಗದು ಹಾಗೂ ಚಿನ್ನಾಭರಣ ಸೇರಿದಂತೆ ಹಲವು ದಾಖಲೆಗಳು ಪತ್ತೆಯಾಗಿರುವ ಪ್ರಕರಣಗಳು ಈ ಹಿಂದೆ ವರದಿಯಾಗಿವೆ.
ಭೂಸ್ವಾಧೀನಾಧಿಕಾರಿ ಮಲ್ಲಿಕಾರ್ಜುನ ಅವರ ನಿವಾಸ ಸೇರಿ ವಿವಿಧ ಕಡೆ ದಾಳಿ ನಡೆದಿದೆ. ಮಲ್ಲಿಕಾರ್ಜುನ ಅವರ ನಿವಾಸದಲ್ಲಿ ಅಧಿಕಾರಿಗಳು ದಾಖಲೆಗಳು ಹಾಗೂ ಆಸ್ತಿ-ಪಾಸ್ತಿಗೆ ಸಂಬಂಧಿಸಿದ ಮಾಹಿತಿಯನ್ನು ಪರಿಶೀಲಿಸುತ್ತಿದ್ದಾರೆ.
ದಾಳಿಯ ವೇಳೆ ಏನೇನು ದಾಖಲೆಗಳು ಹಾಗೂ ಆಸ್ತಿ ವಿವರಗಳು ಪತ್ತೆಯಾಗಿವೆ ಎಂಬುದು ಲೋಕಾಯುಕ್ತ ಅಧಿಕಾರಿಗಳ ಶೋಧ ಕಾರ್ಯ ಪೂರ್ಣಗೊಂಡ ಬಳಿಕ ಸ್ಪಷ್ಟವಾಗಲಿದೆ. ಹೆಚ್ಚಿನ ಮಾಹಿತಿ ತನಿಖೆಯ ನಂತರ ಹೊರಬೀಳುವ ನಿರೀಕ್ಷೆಯಿದೆ.