LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ರೈಲ್ವೆ ಇಲಾಖೆಯಲ್ಲಿ 22,000 ಖಾಲಿ ಹುದ್ದೆಗಳ ಭರ್ಜರಿ ನೇಮಕಾತಿ

ರೈಲ್ವೆ ಇಲಾಖೆ ವ್ಯಾಪ್ತಿಯಲ್ಲಿ ಖಾಲಿ ಇರುವ ಬರೋಬ್ಬರಿ 22 ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.

ಭಾರತೀಯ ರೈಲ್ವೆ ಸಚಿವಾಲಯದ ಅಧೀನದಲ್ಲಿರುವ ರೈಲ್ವೆ ನೇಮಕಾತಿ ಮಂಡಳಿಗಳು (RRB) ಲೆವೆಲ್-1 ಹುದ್ದೆಗಳ ಭರ್ತಿಗೆ ಕೇಂದ್ರಿತ ಉದ್ಯೋಗ ಅಧಿಸೂಚನೆ (CEN) ಸಂಖ್ಯೆ 09/2025 ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ.

ಈ ಅಧಿಸೂಚನೆಯ ಮೂಲಕ ದೇಶಾದ್ಯಂತ ವಿವಿಧ ರೈಲ್ವೆ ವಲಯಗಳಲ್ಲಿ ಒಟ್ಟು ಸುಮಾರು 22,000 ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ. ಏಳನೇ ವೇತನ ಆಯೋಗದ ಪೇ ಮ್ಯಾಟ್ರಿಕ್ಸ್ ಅಡಿಯಲ್ಲಿ ಈ ನೇಮಕಾತಿ ನಡೆಯುತ್ತದೆ ಎಂದು ಅಧಿಸೂಚನೆಯಲ್ಲಿ ಮಾಹಿತಿ ನೀಡಿಲಾಗಿದೆ.

ಜ.21ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಆಸಕ್ತ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಬೇಕಿದೆ. 2026ರ ಜನವರಿ 21ರಿಂದ ಅರ್ಜಿ ಸಲ್ಲಿಕೆ ಆರಂಭವಾಗುತ್ತದೆ. ಅರ್ಜಿ ಸಲ್ಲಿಕೆಗೆ ಫೆಬ್ರವರಿ 20ರವರೆಗೆ ಕಾಲಾವಕಾಶ ನೀಡಲಾಗಿದೆ. ಅಭ್ಯರ್ಥಿಗಳು http://www.rrbapply.gov.in ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಲು ಕೂಡಲೇ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಟ್ಟುಕೊಳ್ಳಬೇಕಿದೆ.

ಮಾಸಿಕ ವೇತನ ರೈಲ್ವೆ ಇಲಾಖೆಯ ಸದರಿ ಹುದ್ದೆಗಳಿಗೆ ಅಗತ್ಯವಿರುವ ಶೈಕ್ಷಣಿಕ ಅರ್ಹತೆ ಮತ್ತು ವೈದ್ಯಕೀಯ ಮಾನದಂಡಗಳು ಸಂಬಂಧಿಸಿದಂತೆ ಸಂಪೂರ್ಣ ವಿವರಗಳನ್ನು ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ. ಲೆವೆಲ್-1 ರ ವಿವಿಧ ಹುದ್ದೆಗಳಿಗೆ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮೂಲ ವೇತನವಾಗಿ ಮಾಸಿಕ 18,000 ರೂಪಾಯಿ ನಿಗದಿಪಡಿಸಲಾಗಿದೆ.

ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಅಭ್ಯರ್ಥಿಗಳ ವಯೋಮಿತಿ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳ ವಯೋಮಿತಿ 2026ರ ಜನವರಿ 1ರ ವೇಳೆಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 33 ವರ್ಷದೊಳಗೆ ಇರಬೇಕು. ಅಂಥವರು ಮಾತ್ರವೇ ಅರ್ಜಿ ಸಲ್ಲಿಸಬಹುದಾಗಿದೆ. ಜಾತಿ ಮೀಸಲಾತಿ ನಿಯಮಾನುಸಾರ ಆಯಾ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಅನ್ವಯಿಸಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಟ ಮಂತ್ರದ ಶಕ್ತಿ ಇರುವ ವಸ್ತುಗಳನ್ನು ದಾರಿಯಲ್ಲಿ ಯಾವುದೇ ಕಾರಣಕ್ಕೂ ತುಳಿಯಬೇಡಿ ಅಕಸ್ಮಾತ್ ತುಳಿದರೆ ಸಮಸ್ಯೆ ಕತ್ತಿಟ್ಟ ಬುತ್ತಿ!ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿ ಪ್ರಕಟ.! ಇಲ್ಲಿದೆ ವಿವರದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 05-09-2026ಸೆ.6 ರಿಂದ ಭದ್ರಾ ಮೇಲ್ದಂಡೆ ಯೋಜನೆ ಐತಿಹಾಸಿಕ ಕ್ಷಣ: ಚಿತ್ರದುರ್ಗ ಶಾಖಾ ಕಾಲುವೆಗೆ ಹರಿಯಲಿದೆ ನೀರು.!-ಚೆನ್ನಬಸವಣ್ಣ ಅವರ ವಚನ.!‘ಯುವ ದಸರಾ’ ಸಂಭ್ರಮ ಚಾಲನೆಗೆ ನಟ ಪ್ರಭುದೇವ.!ಈ ಕಾರಣಕ್ಕೆ 'ಫೋಕ್ಸ್‌ವ್ಯಾಗನ್' ಸಂಸ್ಥೆಯಲ್ಲಿ 1 ಲಕ್ಷ ಉದ್ಯೋಗಗಳಿಗೆ ಕತ್ತರಿ.!ಕಾಳಿ ಮಂತ್ರದ ಪ್ರಯೋಗ! ಮಹಾಕಾಳಿ ಯಂತ್ರ ಮಂತ್ರ ಸಿದ್ಧಿಯಿಂದ ಆಕರ್ಷಣ ವಶೀಕರಣತಂತ್ರಜ್ಞಾನ ಹಾಗೂ ಕೌಶಲಾಧಾರಿತ ಶಿಕ್ಷಣಕ್ಕೆ ಆದ್ಯತೆ ನೀಡಿ: -ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ಮಕ್ಕಳಲ್ಲಿ ಅಂಚೆ ಚೀಟಿ ಸಂಗ್ರಹಣೆಗೆ ಪ್ರೋತ್ಸಾಹ: ‘ಸ್ಪರ್ಶ' ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ