ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಸಂಕಷ್ಟ ಎದುರು
ಬೆಂಗಳೂರು: ಶಾಸಕ ಜನಾರ್ದನ ರೆಡ್ಡಿಗೆ ಇದೀಗ ಸಂಕಷ್ಟ ಎದುರಾಗಿದೆ. ಧರ್ಮಸ್ಥಳದ ಬುರುಡೆ ಕೇಸ್‌ನಲ್ಲಿ ಮಾಜಿ ಐಎಎಸ್ ಅಧಿಕಾರಿ ಹಾಗೂ ಹಾಲಿ ಸಂಸದ ಸಸಿಕಾಂತ್ ಸೆಂಥಿಲ್ ಅವರ ಕೈವಾಡ ಇದೆ ಎಂದು ಗಂಭೀರ ಆರೋಪ ಮಾಡಿದ್ದ ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಮಾನನಷ್ಟ ದಾಖಲಿಸಿದ್ದಾರೆ.
ಸಸಿಕಾಂತ್ ಸೆಂಥಿಲ್ ಅವರ ಖಾಸಗಿ ದೂರು ಸ್ವೀಕರಿಸಿದ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್, ಆ. 24ರಂದು ಖುದ್ದಾಗಿ ಹಾಜರಾಗುವಂತೆ ಜನಾರ್ದನ ರೆಡ್ಡಿ ಸಮನ್ಸ್ ಜಾರಿ ಮಾಡಿ, ಆ. 24ಕ್ಕೆ ವಿಚಾರಣೆಯನ್ನು ಮುಂದೂಡಿದೆ.