ಚಿತ್ರದುರ್ಗ; ಶಾಸಕ ಸಮರ್ಥ್ ಶಾಮನೂರು ಅವರ ಕಾರು ಅಪಘಾತಕ್ಕಿಡಾಗಿದೆ. !
ಚಿತ್ರದುರ್ಗದ ಹಿರಿಯೂರು ತಾಲ್ಲೂಕಿನ ಕಸ್ತೂರಿ ರಂಗಪ್ಪನಹಳ್ಳಿ ಗೇಟ್ ಸಮೀಪ ಮುಂದೆ ಹೋಗುತ್ತಿದ್ದ ವಾಹನವನ್ನು ಓವರ್‌ಟೇಕ್ ಮಾಡುವಾಗ ಈ ಅಪಘಾತ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಮುಂದಿನ ಕಾರು ರಸ್ತೆಯಲ್ಲೇ ಪಲ್ಟಿಯಾಗಿದೆ. ಆ ಕಾರಿನಲ್ಲಿದ್ದ ಬಳ್ಳಾರಿಯ ಸಂದೀಪ್ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಅದೃಷ್ಟವಶಾತ್ ಸಮರ್ಥ್ ಶಾಮನೂರು ಸೇರಿದಂತೆ ಅವರ ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.