-ಮುಕ್ತಾಯಕ್ಕ ಅವರ ವಚನ.!
ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ನಡೆದು ನಡೆದು ನಡೆಯ ಕಂಡವರು
ನುಡಿದು ನುಡಿದು ಹೇಳುತ್ತಿಹರೆ ?
ನುಡಿದು ನುಡಿದು ಹೇಳುವನ್ನಕ್ಕರ
ನಡೆದುದೆಲ್ಲಾ ಹುಸಿಯೆಂಬೆನು.
ಮಾತಿನ ಮಥನದಿಂದಾದ ಅರಿವು
ಕರಣಮ ಥನದಿಂದಾದುದಲ್ಲದೆ,
ಅನುಪಮ ಸ್ವರಭೇದವಾದ ಪರಿ ಎಂತು ಹೇಳಾ ?
ಇದಿರ ಗೆಲಬೇಕೆಂದು ನುಡಿದುಕೊಂಡಡೇನು,
ಮನಕ್ಕೆ ಮನವೆ ಸಾಕ್ಷಿಯಾಗಿ ನಿಃಪತಿಯಲ್ಲ ನೋಡಾ ?ಎನ್ನ ಅಜಗಣ್ಣತಂದೆ ಶಬುದಕ್ಕೆ ಹೇಸಿ ಮುಗುದನಾದನು.
-ಮುಕ್ತಾಯಕ್ಕ