ಮೈಸೂರು: ಖಿಲ್ಲೆ ಮೊಹಲ್ಲಾದ ಹೊಸಮಠದ ಅಧ್ಯಕ್ಷ ಚಿದಾನಂದ ಸ್ವಾಮೀಜಿ(76) ಲಿಂಗೈಕ್ಯರಾಗಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು JSS ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಲಿಂಗೈಕ್ಯರಾಗಿದ್ದಾರೆ.
ಅನಾರೋಗ್ಯದ ಕಾರಣದಿಂದಾಗಿ ಅವರು ಬಹಳ ದಿನಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಈ ಹೊಸಮಠವು ಧಾರ್ಮಿಕ ಚಟುವಟಿಕೆಗಳೊಂದಿಗೆ ನಟರಾಜ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದೆ.
ಈ ಮಠದ ಜವಾಬ್ದಾರಿಯನ್ನು ಹಲವು ದಶಕಗಳಿಂದ ಅವರು ನೋಡಿಕೊಳ್ಳುತ್ತಿದ್ದರು.