LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ನಾಗಪುರ ದೀಕ್ಷಾಭೂಮಿ ಯಾತ್ರೆ: ಅರ್ಜಿ ಆಹ್ವಾನ

ನಾಗಪುರ ದೀಕ್ಷಾಭೂಮಿ ಯಾತ್ರೆ: ಅರ್ಜಿ ಆಹ್ವಾನ

 

ಚಿತ್ರದುರ್ಗ: 2026-27ನೇ ಸಾಲಿನ ಅಕ್ಟೋಬರ್ 21ರ ವಿಜಯದಶಮಿಯಂದು ನಾಗಪುರದ ದೀಕ್ಷಾಭೂಮಿಯಲ್ಲಿ ನಡೆಯಲಿರುವ ‘ಧಮ್ಮ ಪ್ರವರ್ತನ ದಿನ' ಕಾರ್ಯಕ್ರಮಕ್ಕೆ ತೆರಳಲು ಬಯಸುವ ಅರ್ಹ ಯಾತ್ರಾರ್ಥಿಗಳಿಂದ ಸಮಾಜ ಕಲ್ಯಾಣ ಇಲಾಖೆಯು ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅಕ್ಟೋಬರ್ 09 ಅರ್ಜಿ ಸಲ್ಲಿಸಲು ಕೊನೆಯ ದಿನ.

ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 22 ರವರೆಗೆ ಜಿಲ್ಲೆಗಳಿಂದ ನಾಗಪುರಕ್ಕೆ ಪ್ರಯಾಣಿಸಲು ಮತ್ತು ಹಿಂತಿರುಗಲು ಬಸ್ ಹಾಗೂ ರೈಲು ವ್ಯವಸ್ಥೆಯನ್ನು ಇಲಾಖೆಯಿಂದ ಕಲ್ಪಿಸಲಾಗುತ್ತದೆ. ಆಸಕ್ತರು ಇಲಾಖೆಯ ವೆಬ್‍ಸೈಟ್ https://swd.karnataka.gov.in/  ಮೂಲಕ ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 09 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಯಾತ್ರಾರ್ಥಿಗಳು ಬಿ.ಪಿ.ಎಲ್ ಕಾರ್ಡ್ ಹೊಂದಿರಬೇಕು ಹಾಗೂ ಕನಿಷ್ಠ 18 ವರ್ಷ ವಯಸ್ಸಿನವರಾಗಿರಬೇಕು. ಎಸ್.ಸಿ/ಎಸ್.ಟಿ ಸಮುದಾಯದವರು ಹಾಗೂ ಇತರೆ ಸಮುದಾಯದ ಜನರು ಬಾಬಆ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳು ಸಹ ಯಾತ್ರೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಸಮಾಜ ಸೇವೆಯ ಅನುಭವ ಹೊಂದಿರಬೇಕಾಗುತ್ತದೆ. ರಾಜ್ಯದ ಆಯಾ ಜಿಲ್ಲೆಗಳಿಂದ ನಾಗಪುರಕ್ಕೆ ಹೋಗಿ ಬರಲು ತಗಲುವ ಸಾರಿಗೆ ವೆಚ್ಚವನ್ನು ಸರ್ಕಾರವೇ ಭರಿಸಲಿದೆ.

ಈಗಾಗಲೇ ದೀಕ್ಷಾಭೂಮಿಗೆ ಪ್ರಯಾಣಿಸಿದವರು ಹಾಗೂ ಸರ್ಕಾರಿ ಅಥವಾ ಸರ್ಕಾರದ ಅಂಗಸಂಸ್ಥೆಗಳ ನೌಕರರು ಅರ್ಜಿ ಸಲ್ಲಿಸಲು ಅರ್ಹರಲ್ಲ. ಯಾತ್ರಾರ್ಥಿಗಳ ವಸತಿ ಮತ್ತು ಭೋಜನದ ವೆಚ್ಚವನ್ನು ಕಡ್ಡಾಯವಾಗಿ ಯಾತ್ರಾರ್ಥಿಗಳೇ ಭರಿಸಬೇಕು ಎಂದು ಹೊಳಲ್ಕೆರೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

 

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಮ್ಮ ಮಕ್ಕಳು ತುಂಬಾ ಮಂಕು ಇದ್ರೆ ಓದಲ್ಲ ಮತ್ತು ಹೇಳಿದ ಮಾತು ಕೇಳೋದಿಲ್ಲ ಅಂದರೆ ಹೀಗೆ ಮಾಡಿರಿ..!?ಸಣ್ಣ ಮತ್ತು ಅತಿಸಣ್ಣ ರೈತರಿಗೆ ಗುಡ್ ನ್ಯೂಸ್.! ಇಲ್ಲಿದೆ ಮಾಹಿತಿ.!ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ:ದಾವಣಗೆರೆ ವಿಶ್ವವಿದ್ಯಾನಿಲಯದಿಂದ MBA ಖಾಲಿ ಸೀಟುಗಳ ಭರ್ತಿಗೆ ಅರ್ಜಿ ಆಹ್ವಾನಶ್ರೀ ಪಂಚಮಶಾಲಿ ಮಠದಲ್ಲಿ ಅಕ್ಟೋಬರ್‌ 31 ರವರೆಗೆ ನಿಷೇದಾಜ್ಞೆ ಜಾರಿ.!ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ಅ.31 ರವರೆಗೆ ವಿಸ್ತರಣೆನಾಗಪುರ ದೀಕ್ಷಾಭೂಮಿ ಯಾತ್ರೆ: ಅರ್ಜಿ ಆಹ್ವಾನಎಲ್ಲಾ ಸಮುದಾಯದವರನ್ನು ಒಳಗೊಂಡ ಮದಕರಿನಾಯಕ ಜಯಂತ್ಯೋತ್ಸವ.!ಹಳಿಯೂರು ಗ್ರಾಮದ ನಿವಾಸಿ ರವಿಚಂದ್ರ ಕೆ.  ವಿರುದ್ದ ಕಾನೂನು ಕ್ರಮಕ್ಕೆ ಒತ್ತಾಯಸೂರ್ಯಕಾಂತಿ ಖರೀಧಿ ಕೇಂದ್ರ ತೆರೆಯುವಂತೆ ಒತ್ತಾಯ.!