ಬೆಂಗಳೂರು: ಕೇಂದ್ರ ಸಚಿವ HD ಕುಮಾರಸ್ವಾಮಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಹಾಸನ ಜಿಲ್ಲಾಧಿಕಾರಿ ಕಚೇರಿಯ ಲಂಚದ ವಾಟ್ಸಾಪ್ ಚಾಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿಗೆ ಸೈಬರ್ ಕಮಾಂಡ್ ಸೆಂಟರ್ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ.
ಭ್ರಷ್ಟಾಚಾರದ ಆರೋಪ ಮಾಡಿ ಎಚ್‌ಡಿಕೆ ಬಹಿರಂಗಪಡಿಸಿದ್ದ ಈ ಚಾಟ್ ಎಐ ಮೂಲಕ ಸೃಷ್ಟಿಸಿದ ನಕಲಿ ಸಂದೇಶ ಎಂದು ಡಿಸಿ ಪಿಎ ಶಶಿಕಿರಣ್ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಚಾಟ್ ಮೂಲದ ಕುರಿತು ಮಾಹಿತಿ ಪಡೆಯಲು ಪೊಲೀಸರು ಈ ನೋಟಿಸ್ ನೀಡಿದ್ದಾರೆ.