LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಕನ್ನಡ ಮಾಧ್ಯಮದಲ್ಲಿ ಓದಿದವರು ದಡ್ಡರಲ್ಲ : ಡಾ.ಎಲ್.ಪಾಲಾಕ್ಷಯ್ಯ

ಕನ್ನಡ ಮಾಧ್ಯಮದಲ್ಲಿ ಓದಿದವರು ದಡ್ಡರಲ್ಲ : ಡಾ.ಎಲ್.ಪಾಲಾಕ್ಷಯ್ಯ

 

ಚಿತ್ರದುರ್ಗ : ಕನ್ನಡ ಮಾಧ್ಯಮದಲ್ಲಿ ಓದಿದವರು ದಡ್ಡರಲ್ಲ. ಇಂಗ್ಲಿಷ್ ಮಾಧ್ಯಮದಲ್ಲಿ ಓದಿದವರು ಬುದ್ದಿವಂತರಲ್ಲ ಎಂದು ಬಸವೇಶ್ವರ ಮೆಡಿಕಲ್ ಕಾಲೇಜಿನ ವೈದ್ಯಕೀಯ ಅಧೀಕ್ಷಕ ಡಾ.ಎಲ್.ಪಾಲಾಕ್ಷಯ್ಯ ಹೇಳಿದರು.

ಭಾರತೀಯ ವೈದ್ಯಕೀಯ ಸಂಘ, ಅಕ್ಷರ ಚಪ್ಪರ ಕನ್ನಡ ಸಾಹಿತ್ಯ ಮತ್ತು ಸಾಂಸ್ಕøತಿಕ ಸಂಸ್ಥೆ, ಚಿನ್ಮುಲಾದ್ರಿ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ, ಶರಣ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಇವುಗಳ ಸಹಯೋಗದೊಂದಿಗೆ .ಎಂ..ಹಾಲ್ನಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಚಿನ್ಮುಲಾದ್ರಿ ಅಕ್ಷರೋತ್ಸವ ಕವಿಗೋಷ್ಟಿ ಮತ್ತು ಸಾಂಸ್ಕøತಿಕ ಕಾರ್ಯಕ್ರಮ ಉದ್ಗಾಟಿಸಿ ಮಾತನಾಡಿದರು.

ನಾನು ಕೂಡ ಆಂಗ್ಲ ಮಾಧ್ಯಮದಲ್ಲಿ ಓದಿ ವೈದ್ಯನಾಗಿದ್ದೇನೆ. ಪ್ರತಿಯೊಬ್ಬರು ಮಕ್ಕಳನ್ನು ಕನ್ನಡ ಮಾಧ್ಯಮದಲ್ಲಿ ಓದಿಸಿ. ಆಗ ಕನ್ನಡ ನಾಡು, ನುಡಿ, ನೆಲ, ಜಲದ ಬಗ್ಗೆ ಅಭಿಮಾನ ಮೂಡುತ್ತದೆ ಎಂದು ಕರೆ ನೀಡಿದರು.

ವೈಜ್ಞಾನಿಕ ಯುಗದಲ್ಲಿ ಎಲ್ಲರು ರಕ್ತದೊತ್ತಡ ಮತ್ತು ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವ ಇಂದಿನ ದಿನಮಾನಗಳಲ್ಲಿ ಸಾಹಿತ್ಯ ಮತ್ತು ಕವಿತೆಗಳಿಂದ ಪ್ರತಿಯೊಬ್ಬರು ಒತ್ತಡದಿಂದ ಹೊರ ಬಂದು ತುಸು ನೆಮ್ಮದಿ ಕಂಡುಕೊಳ್ಳಬಹುದು ಎಂದು ನುಡಿದರು.

ಚಿನ್ಮೂಲಾದ್ರಿ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆಯ ಗೌರವಾಧ್ಯಕ್ಷ ಬಿ.ಕೆ.ರಹಮತ್ವುಲ್ಲಾ ಮಾತನಾಡಿ ವೈದ್ಯರು ತಮ್ಮ ಕರ್ತವ್ಯದಲ್ಲಿ ನಿರ್ಲಕ್ಷೆ ವಹಿಸಿದರೆ ರೋಗಿ ಸಾಯುತ್ತಾನೆ. ವಕೀಲರು ಸರಿಯಾಗಿ ವಾದ ಮಂಡಿಸದಿದ್ದರೆ ಕಕ್ಷಿದಾರ ಶಿಕ್ಷೆ ಅನುಭವಿಸಬೇಕಾಗುತ್ತದೆ. ಹಾಗಾಗಿ ಸಮಾಜದಲ್ಲಿ ವೈದ್ಯರು ಮತ್ತು ವಕೀಲರ ಪಾತ್ರ ಅತ್ಯಂತ ಅಮೂಲ್ಯವಾದುದು. ಆಧುನಿಕ ಯುಗದಲ್ಲಿ ಎಲ್ಲರೂ ಒತ್ತಡದ ಜೀವನದಲ್ಲಿ ಮುಳುಗಿರುವುದರಿಂದ ಇಂತಹ ಸಾಹಿತ್ಯ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳಿಂದ ಮನಸ್ಸಿಗೆ ಮುದ ನೀಡುತ್ತದೆ ಎಂದು ಅಭಿಪ್ರಾಯಪಟ್ಟರು.

ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮ ಖಂಡಿಸಿ ಸಾವಿರಾರು ವಿದ್ಯಾರ್ಥಿಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದಾಗ ಪೊಲೀಸರು ಲಾಠಿ ಪ್ರಹಾರ ನಡೆಸಬೇಕಾಯಿತು. ಶಾಂತಿಯುತ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತು. ವಿದ್ಯಾರ್ಥಿಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಜೈಲಿಗೆ ಹೋಗಿ ಬಂದವರು, ಕೊಲೆ, ದರೋಡೆ, ರೇಪ್ ಕೇಸ್ನಲ್ಲಿ ಸಿಲುಕಿದವರು, ಹಣ ಕೊಳ್ಳೆ ಹೊಡೆದವರು ರಾಜಕೀಯ ಪ್ರವೇಶಿಸುವಂತಾಗಿದೆ. ಒಂದು ದಿನ ಜೈಲಿಗೆ ಹೋಗಿ ಬಂದವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎನ್ನುವ ಹೊಸ ಕಾನೂನು ಜಾರಿಗೆ ಬಂದಾಗ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ ಎಂದರು.

ಅಕ್ಷರ ಚಪ್ಪರ ಕನ್ನಡ ಸಾಹಿತ್ಯ ಮತ್ತು ಸಾಂಸ್ಕøತಿಕ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷೆ ಮಧುಶ್ರಿ .ಪಿ. ಪ್ರಾಸ್ತಾವಿಕವಾಗಿ ಮಾತನಾಡಿದರು.

ಅಕ್ಷರ ಚಪ್ಪರ ಕನ್ನಡ ಸಾಹಿತ್ಯ ಮತ್ತು ಸಾಂಸ್ಕøತಿಕ ಸಂಸ್ಥೆಯ ಗೌರವಾಧ್ಯಕ್ಷ ಆರ್.ನಾಗೇಶ್, ಚಿನ್ಮೂಲಾದ್ರಿ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ಅಧ್ಯಕ್ಷೆ ಶಾರದಾ ಜೈರಾಮ್, ದಂತ ವೈದ್ಯೆ ಡಾ.ಆರ್.ಗೌರಮ್ಮ, ಚಿನ್ಮೂಲಾದ್ರಿ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ಸಂಸ್ಥಾಪಕಿ ದಯಾ ಪುತ್ತೂರ್ಕರ್ ಇವರುಗಳು ವೇದಿಕೆಯಲ್ಲಿದ್ದರು. ಮೂವತ್ತಕ್ಕೂ ಹೆಚ್ಚು ಕವಿಗಳು ಕವನಗಳನ್ನು ವಾಚಿಸಿದರು.

 

 

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಈ 3 ಶತ್ರುಗಳು ನಿಮ್ಮ ಮನೆಯಲ್ಲಿದ್ದಾರೆ, ಸಮಯಕ್ಕೆ ಸರಿಯಾಗಿ ಗುರುತಿಸದಿದ್ರೆ ಲೈಫೇ ಬರ್ಬಾದ್‌ ಆಗುತ್ತೆ!ಕನ್ನಡ ಮಾಧ್ಯಮದಲ್ಲಿ ಓದಿದವರು ದಡ್ಡರಲ್ಲ : ಡಾ.ಎಲ್.ಪಾಲಾಕ್ಷಯ್ಯಪೋಷಕರಿಗೆ ತಮ್ಮ ಮಕ್ಕಳಲ್ಲಿ ನಾಟ್ಯದ ಅಭಿರುಚಿ ಬೆಳೆಸುವಲ್ಲಿ ಮುಂದಾಗಲಿ: ಸಿ.ಎಸ್.ಗಾಯಿತ್ರಿಧರ್ಮ ಎಂದರೆ ಬೆಳಕಿನ ಸತ್ಯಶೋಧನೆ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ--ಒಕ್ಕಲಿಗ ಮುದ್ದಣ್ಣ  ಅವರ ವಚನವಿದೇಶಿ ಕಂಪನಿಗಳನ್ನು ದೇಶದಿಂದ ಒದ್ದೊಡಿಸುವ ಚಳುವಳಿ: ಜೆ.ಯಾದವರೆಡ್ಡಿಮಾಯಕೊಂಡ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮೊದಲ ಆದ್ಯತೆ: ಸಚಿವ ಕೆ.ಎಸ್. ಬಸವಂತಪ್ಪದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 09-08-2026ಶತ್ರುಗಳು ಕೂಡ ನಿಮ್ಮ ಮಾತು ಕೇಳಿ ನಿಮಗೆ ಶರಣಾಗತಿ ಆಗಬೇಕೆಂದರೆ ಈ ತಂತ್ರ ಶಕ್ತಿ ಇರುವ ವಸ್ತುವನ್ನು ನಿಮ್ಮತ್ರ ಇಟ್ಟುಕೊಳ್ಳಿ?-ಕನ್ನಡಿಕಾಯಕದ ಅಮ್ಮಿದೇವಯ್ಯ ಅವರ ವಚನ