ಚಿತ್ರದುರ್ಗ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ವಿವಿಧ ಸಾಮಾಜಿಕ ಕ್ಷೇತ್ರಗಳಲ್ಲಿ ರಕ್ಷಾಬಂಧನ ಕಾರ್ಯಕ್ರಮವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಪೊಲೀಸ್ ಸಿಬ್ಬಂದಿ, ಸೈನಿಕರು, ವೈದ್ಯರು, ಪೌರಕಾರ್ಮಿಕರು, ಆಟೋ ಚಾಲಕರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ರಾಖಿ ಕಟ್ಟಿ, ಪರಸ್ಪರ ಸಹೋದರತ್ವ ಮತ್ತು ಸಾಮಾಜಿಕ ಬಾಂಧವ್ಯದ ಸಂದೇಶ ಸಾರಲಾಯಿತು.
ಸಮಾಜದ ವಿವಿಧ ವರ್ಗಗಳೊಂದಿಗೆ ಆತ್ಮೀಯತೆ, ಸಹೋದರತ್ವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಬೆಳೆಸುವ ಉದ್ದೇಶದಿಂದ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಗಳಿಗೆ ರಾಖಿ ಕಟ್ಟುವ ಮೂಲಕ ರಕ್ಷಾಬಂಧನ ಆಚರಿಸಿದರು. ಈ ಸಂದರ್ಭದಲ್ಲಿ ಸಮಾಜದ ಪ್ರತಿಯೊಬ್ಬರ ನಡುವೆ ಪರಸ್ಪರ ಪ್ರೀತಿ, ಗೌರವ ಮತ್ತು ರಾಷ್ಟ್ರಭಕ್ತಿಯ ಭಾವನೆ ಬೆಳೆಸುವ ಸಂದೇಶವನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಸಹಪ್ರಾಧ್ಯಾಪಕ ಡಾ, ಎಸ್,ಆರ್, ಲೇಪಕ್ಷ ಜಿಲ್ಲಾಸಂಚಾಲಕ್, ಕನಕರಾಜ್,ಕೋಡಿಹಳ್ಳಿ. ರಾಜ್ಯಕಾರ್ಯಕಾರಣಿ ಸದಸ್ಯ ಕುಬೇರ, ಸುದೀಪ್, ಅಮೂಲ್ಯ,ಪ್ರಶಾಂತ್, ವಂಶಿ, ಮನೋಜ್, ಜೀವನ್,ಮಧು, ದೀಕ್ಷಿತ್,ಶ್ರೇಯಸ್,ಪೃಥ್ವಿ, ಇನ್ನಿತರರು ಇದ್ದರು,