LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಕೆಪಿಎಸ್‌ಸಿ ಸದಸ್ಯೆ ಬಿ.ವಿ. ಗೀತಾ ಶಿವಮೂರ್ತಿ ಕಸ್ಟಡಿ..!

ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಕೆಪಿಎಸ್‌ಸಿ ಸದಸ್ಯೆ ಬಿ.ವಿ. ಗೀತಾ ಶಿವಮೂರ್ತಿ ಕಸ್ಟಡಿ..!

ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಕೆಪಿಎಸ್‌ಸಿ ಸದಸ್ಯೆ ಬಿ.ವಿ. ಗೀತಾ ಶಿವಮೂರ್ತಿ ಕಸ್ಟಡಿ..!

ಬೆಂಗಳೂರು: ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಸದಸ್ಯೆ ಬಿ.ವಿ. ಗೀತಾ ಶಿವಮೂರ್ತಿ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಮಂಗಳವಾರ ಬಂಧಿಸಿದೆ.

ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರೂ ಗೈರಾದ ಹಿನ್ನೆಲೆಯಲ್ಲಿ, ಎಸ್‌ಐಟಿ ಅಧಿಕಾರಿಗಳು ಸಂಜಯನಗರದಲ್ಲಿರುವ ಅವರ ನಿವಾಸಕ್ಕೆ ತೆರಳಿ ವಶಕ್ಕೆ ಪಡೆದಿದ್ದಾರೆ. ಬಳಿಕ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಹೆಚ್ಚಿನ ವಿಚಾರಣೆಗಾಗಿ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿದೆ.

ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಭ್ಯರ್ಥಿಯೊಬ್ಬರಿಂದ ₹20 ಲಕ್ಷ ಲಂಚ ಪಡೆದ ಗಂಭೀರ ಆರೋಪ ಗೀತಾ ಶಿವಮೂರ್ತಿ ಅವರ ಮೇಲಿದೆ. ಇದೇ ಪ್ರಕರಣದಲ್ಲಿ ಈ ಹಿಂದೆ ಜಾರಿ ನಿರ್ದೇಶನಾಲಯ (ಇ.ಡಿ) ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿತ್ತು.

ತರುವಾಯ ಜಾಮೀನಿನ ಮೇಲೆ ಹೊರಬಂದಿದ್ದ ಅವರು, ಎಸ್‌ಐಟಿಯಿಂದ ಮತ್ತೆ ಬಂಧನಕ್ಕೊಳಗಾಗುವ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದೀಗ ಎಸ್‌ಐಟಿ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

 

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಾತಕಗಳ ಪ್ರಕಾರ ಯಾವ ಗ್ರಹಗತಿಗಳ ತಾಂತ್ರಿಕ ಶಕ್ತಿಯಿಂದ ಆರೋಗ್ಯ ಸಮಸ್ಯೆ ಮಾನಸಿಕ ಖಿನ್ನತೆ ಹೆಚ್ಚಾಗುತ್ತದೆ ತಿಳಿದುಕೊಳ್ಳಿ!ಬೆಳ್ಳಂಬೆಳಗ್ಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ದಾಳಿ..!ಐಪಿಎಲ್‌ನಿಂದ ಧೋನಿ ನಿವೃತ್ತಿ ಘೋಷಿಸಿದ್ದಾರೆ.!ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಕೆಪಿಎಸ್‌ಸಿ ಸದಸ್ಯೆ ಬಿ.ವಿ. ಗೀತಾ ಶಿವಮೂರ್ತಿ ಕಸ್ಟಡಿ..!ಪ್ರೆವೆಂಟ್ ಶೋಯಿಂಗ್ ಬೆಳೆ ವಿಮೆ ತುರ್ತಾಗಿ ನೀಡುವಂತೆ ರೈತ ಸಂಘ ಒತ್ತಾಯ..!ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಕೇಂದ್ರ ತೆರೆಯಲು ಸರ್ಕಾರಕ್ಕೆ ಪ್ರಸ್ತಾವನೆಎಸ್.ಟಿ ಯುವಕರಿಗೆ ಸೋಲಾರ್ ಪಿವಿ ತರಬೇತಿಗೆ ಅರ್ಜಿ ಆಹ್ವಾನ18-11-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ-ಸತ್ಯಕ್ಕ  ಅವರ ವಚನ.ವಾಮಾಚಾರಕ್ಕೆ ಮಾಟ ಮಂತ್ರ ದೂಷಕ್ಕೆ ಶತ್ರು ದೃಷ್ಟಿಗೆ ಜನ ದೃಷ್ಟಿಗೆ ದೃಷ್ಟಿಯಿಂದ ಈ ಶಕ್ತಿಶಾಲಿ ಯಂತ್ರವನ್ನು ಧಾರಣೆ ಮಾಡಿ!