LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆ :ನಿಷೇಧಾಜ್ಞೆ ಜಾರಿ

ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆ :ನಿಷೇಧಾಜ್ಞೆ ಜಾರಿ

 

ಚಿತ್ರದುರ್ಗ: ಚಿತ್ರದುರ್ಗ ನಗರ ವ್ಯಾಪ್ತಿಯ 26 ಪರೀಕ್ಷಾ ಕೇಂದ್ರಗಳಲ್ಲಿ ಆಗಸ್ಟ್ 02 ರಂದು ನಡೆಯಲಿರುವ ಪೊಲೀಸ್ ಕಾನ್ಸ್ಸ್ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.

ಕಾರ್ಯನಿರ್ವಾಹಕ ನಿರ್ದೇಶಕರು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬೆಂಗಳೂರು ಇವರ ವೇಳಾಪಟ್ಟಿಯಂತೆ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಹಾಗೂ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕಲಂ 163 ಅಡಿಯಲ್ಲಿ ಆದೇಶ ಹೊರಡಿಸಲಾಗಿದ್ದು, ಕೇಂದ್ರಗಳ ಸುತ್ತಮುತ್ತಲಿರುವ ಎಲ್ಲಾ ಜಿರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಹಾಗೂ ಇಂಟರ್ನೆಟ್ ಕೇಂದ್ರಗಳನ್ನು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಡ್ಡಾಯವಾಗಿ ಮುಚ್ಚುವಂತೆ ಸೂಚಿಸಲಾಗಿದೆ.

ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದ ಒಳಗೆ ಯಾವುದೇ ಕಾರಣಕ್ಕೂ ಮೊಬೈಲ್ ಪೋನ್ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬ್ರಾಹ್ಮಣ ಅಭಿವೃದ್ಧಿ ಮಂಡಳಿ: ಸ್ವ ಉದ್ಯಮ ನೇರ ಸಾಲ ಯೋಜನೆಗೆ ಅರ್ಜಿ ಆಹ್ವಾನಪವಾಡಸದೃಶ್ಯ ಸತ್ತ ಮಹಿಳೆ ರಸ್ತೆಗುಂಡಿಯ ಜರಕ್ ನಿಂದ ಬದುಕಿದ ಸುದ್ದಿ.!ಕಲ್ಲೇಟಿಗಿಂತ ಕಣ್ಣೇಟು ಜೋರಂತೆ ಮನೆ ಕಟ್ಟಡಕ್ಕೆ ದೃಷ್ಟಿ, ಅದರ ಪರಿಹಾರಕ್ಕಾಗಿ ಕೆಲವೊಂದು ಇಲ್ಲಿ ಸೃಷ್ಟಿ. ರಾಜ್ಯದ ವಿವಿಧೆಡೆ ಭಾರಿ ಮಳೆ :  ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ.!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 31-07-2026ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆ :ನಿಷೇಧಾಜ್ಞೆ ಜಾರಿ-ರಾಯಸದ ಮಂಚಣ್ಣ ಅವರ ವಚನಎಕ್ಕದ ಗಿಡದ ಹೂವಿನಿಂದ ನೀವು ಇಷ್ಟ ಪಟ್ಟವರ ವಶ.!4.15ರ ಬ್ರಾಹ್ಮಿ ಮುಹೂರ್ತದಲ್ಲಿ ರಾಮಾಯಣ ಚಿತ್ರದ ಟ್ರೇಲರ್ ಬಿಡುಗಡೆ.! ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಹಾಕದವರಿಗೆ ಇಲ್ಲಿದೆ ಸುದ್ದಿ.! ದಿನಾಂಕ ಮುಂದೂಡಿಕೆ