LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ವಾಹನಗಳ ದಟ್ಟಣೆ ಇರುವ ಕಡೆ ಗುಣ ಮಟ್ಟದ ಹಂಪ್ಸ್ಗಳನ್ನು ಅಳವಡಿಸಲು ಮನವಿ.!

ವಾಹನಗಳ ದಟ್ಟಣೆ ಇರುವ ಕಡೆ ಗುಣ ಮಟ್ಟದ ಹಂಪ್ಸ್ಗಳನ್ನು ಅಳವಡಿಸಲು ಮನವಿ.!

 

ಚಿತ್ರದುರ್ಗ : ನಗರದ ಮುಖ್ಯ ರಸ್ತೆ ಹಾಗೂ ಹೆಚ್ಚು ವಾಹನಗಳ ದಟ್ಟಣೆ ಇರುವ ಕಡೆ ಗುಣ ಮಟ್ಟದ ಹಂಪ್ಸ್ಗಳನ್ನು ಅಳವಡಿಸುವಂತೆ ಕರುನಾಡ ವಿಜಯಸೇನೆ ವತಿಯಿಂದ ನಗರಸಭೆ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ನಾಲ್ಕೈದು ತಿಂಗಳುಗಳ ಹಿಂದೆ ರಸ್ತೆಗೆ ಹಾಕಲಾಗಿದ್ದ ಹಂಪ್ಸ್ಗಳು ಕಳಪೆಯಾಗಿದ್ದ ಪರಿಣಾಮ ಕಿತ್ತು ಹೋಗಿವೆ. ಬಿಲ್ ಪಾವತಿ ಮಾಡದೆ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಆ.15 ರಂದು ಒತ್ತಾಯಿಸಿದ್ದೆವು. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಅಲ್ಲಲ್ಲಿ ಅಪಘಾತಗಳಾಗುತ್ತಿವೆ. ಕೆಲವು ಕಡೆ ಹಂಪ್ಸ್ಗಳು ವಾಹನ ಸವಾರರಿಗೆ ಸರಿಯಾಗಿ ಕಾಣಿಸುವುದಿಲ್ಲ. ಅಂತಹ ಕಡೆ ದ್ವಿಚಕ್ರ ವಾಹನ ಸವಾರರು ಸಾಕಷ್ಟು ಬಾರಿ ಬಿದ್ದು ಕೈಕಾಲುಗಳಿಗೆ ಗಾಯ ಮಾಡಿಕೊಂಡಿರುತ್ತಾರೆ. ಜೆಸಿಆರ್. ತುರುವನೂರು ರಸ್ತೆ, ಹೊಳಲ್ಕೆರೆ ರಸ್ತೆ, ಬಿ.ಡಿ.ರಸ್ತೆ, ದಾವಣಗೆರೆ ರಸ್ತೆ, ಪಂಚಾಚಾರ್ಯ ಕಲ್ಯಾಣ ಮಂಟಪದ ಎದುರುಗಡೆ ಹಾಗೂ ಇನ್ನಿತರೆ ರಸ್ತೆಗಳಲ್ಲಿ ಒಂದು ವಾರದೊಳಗಾಗಿ ಹಂಪ್ಸ್ಗಳನ್ನು ಹಾಕಬೇಕು. ನಗರದ ಬಹುತೇಕ ಕಡೆ ಯು.ಜಿ.ಡಿ. ತುಂಬಿ ಹರಿಯುತ್ತಿರುತ್ತದೆ. ಹಳೆ ಕಾಲದ ಯುಜಿಡಿ. ಬದಲಾವಣೆಯಾಗಬೇಕೆಂದು ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಒತ್ತಾಯಿಸಿದರು.

ಕರುನಾಡ ವಿಜಯಸೇನೆ ಮಹಿಳಾ ಘಟಕದ ಅಧ್ಯಕ್ಷೆ ವೀಣಗೌರಣ್ಣ, ಕಾರ್ಯದರ್ಶಿ ಸಿ.ಜಗದೀಶ್, ಉಪಾಧ್ಯಕ್ಷ ಮುಜಾಹಿದ್ದೀನ್, ನಗರಾಧ್ಯಕ್ಷ ಅವಿನಾಶ್, ವರುಣ್, ಪ್ರದೀಪ್ ಆರ್. ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಮ್ಮ ಶ ತ್ರು ಸಂಹಾರ ನಿಮ್ಮ ಕಣ್ಣು ಮುಂದೆ ನಿಮ್ಮ ಶತ್ರುಗಳು ಸದೆಬಡಿಯಿರಿ ನಿಮ್ಮ ತಂಟೆಗೆ ಬರುವುದಿಲ್ಲ.?ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣ: ಕೆಪಿಎಸ್‌ಸಿ ಸದಸ್ಯೆ ಗೀತಾ ಇಡಿ ವಶಕ್ಕೆ.!ಗ್ರಾಮ ಆಡಳಿತಾಧಿಕಾರಿ ಹಾಗೂ ಗ್ರಾಮ ಸಹಾಯಕ 40 ಸಾವಿರ ಲಂಚ ಸ್ವೀಕಾರ ಲೋಕಾಯುಕ್ತ ಬಲೆಗೆ.!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 07-10-2026ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗವಕಾಶ ಸೃಜನೆಗೆ ಜಿಲ್ಲಾಧಿಕಾರಿ ಎಸ್.ರಮ್ಯ ಸೂಚನೆವಸತಿ ರಹಿತರಿಗೆ ಮನೆಗಳನ್ನು ಕಟ್ಟಿಸಿಕೊಡುವಂತೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಸತ್ಯಾಗ್ರಹ.!ವಾಹನಗಳ ದಟ್ಟಣೆ ಇರುವ ಕಡೆ ಗುಣ ಮಟ್ಟದ ಹಂಪ್ಸ್ಗಳನ್ನು ಅಳವಡಿಸಲು ಮನವಿ.!ಆಸಿಡ್ ಸಂತ್ರಸ್ತರಿಗೆ ಮಾನಸಿಕ, ಸಾಮಾಜಿಕ ಬೆಂಬಲ ಅಗತ್ಯ : ನ್ಯಾಯಾಧೀಶರಾದ ಜಿ.ಡಿ. ಮಹಾವರ್ಕರ್ವಚನ:  -ಸೊಡ್ಡಳ ಬಾಚರಸನಿಮ್ಮ ಮಕ್ಕಳು ತುಂಬಾ ಮಂಕು ಇದ್ರೆ ಓದಲ್ಲ ಮತ್ತು ಹೇಳಿದ ಮಾತು ಕೇಳೋದಿಲ್ಲ ಅಂದರೆ ಹೀಗೆ ಮಾಡಿರಿ..!?