LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ಅ.31 ರವರೆಗೆ ವಿಸ್ತರಣೆ

ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ಅ.31 ರವರೆಗೆ ವಿಸ್ತರಣೆ

 

ಚಿತ್ರದುರ್ಗ: ವಿಕಲಚೇತನ ವಿದ್ಯಾರ್ಥಿಗಳು 2026-27ನೇ ಸಾಲಿಗೆ ಪ್ರೀ-ಮೆಟ್ರಿಕ್ ವಿದ್ಯಾರ್ಥಿವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ಅಕ್ಟೋಬರ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವೈಶಾಲಿ.ಜೆತಿಳಿಸಿದ್ದಾರೆ.

ಅರ್ಹ ವಿಕಲಚೇತನ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳು ಹಾಗೂ ಶಿಕ್ಷಣ ಸಂಸ್ಥೆಗಳ ಮುಖಾಂತರ ರಾಷ್ಟ್ರೀಯ ವಿದ್ಯಾರ್ಥಿವೇತನ ತಂತ್ರಾಂಶ  https://scholarships.gov.in      ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಿದ ನಂತರ ಅರ್ಜಿಯ ಒಂದು ಪ್ರತಿಯನ್ನು ಆಯಾ ತಾಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಅಥವಾ ಗ್ರಾಮ ಪಂಚಾಯಿತಿಯಲ್ಲಿನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕು ಪಂಚಾಯಿತಿ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬಹುದು. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಒನಕೆ ಓಬವ್ವ ಕ್ರೀಡಾಂಗಣ ರಸ್ತೆ, ಚಿತ್ರದುರ್ಗ ಭೇಟಿ ಮಾಡಬಹುದು ಅಥವಾ ದೂರವಾಣಿ ಸಂಖ್ಯೆ 08194-235284 ಕರೆ ಮಾಡಬಹುದು.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಮ್ಮ ಶ ತ್ರು ಸಂಹಾರ ನಿಮ್ಮ ಕಣ್ಣು ಮುಂದೆ ನಿಮ್ಮ ಶತ್ರುಗಳು ಸದೆಬಡಿಯಿರಿ ನಿಮ್ಮ ತಂಟೆಗೆ ಬರುವುದಿಲ್ಲ.?ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣ: ಕೆಪಿಎಸ್‌ಸಿ ಸದಸ್ಯೆ ಗೀತಾ ಇಡಿ ವಶಕ್ಕೆ.!ಗ್ರಾಮ ಆಡಳಿತಾಧಿಕಾರಿ ಹಾಗೂ ಗ್ರಾಮ ಸಹಾಯಕ 40 ಸಾವಿರ ಲಂಚ ಸ್ವೀಕಾರ ಲೋಕಾಯುಕ್ತ ಬಲೆಗೆ.!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 07-10-2026ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗವಕಾಶ ಸೃಜನೆಗೆ ಜಿಲ್ಲಾಧಿಕಾರಿ ಎಸ್.ರಮ್ಯ ಸೂಚನೆವಸತಿ ರಹಿತರಿಗೆ ಮನೆಗಳನ್ನು ಕಟ್ಟಿಸಿಕೊಡುವಂತೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಸತ್ಯಾಗ್ರಹ.!ವಾಹನಗಳ ದಟ್ಟಣೆ ಇರುವ ಕಡೆ ಗುಣ ಮಟ್ಟದ ಹಂಪ್ಸ್ಗಳನ್ನು ಅಳವಡಿಸಲು ಮನವಿ.!ಆಸಿಡ್ ಸಂತ್ರಸ್ತರಿಗೆ ಮಾನಸಿಕ, ಸಾಮಾಜಿಕ ಬೆಂಬಲ ಅಗತ್ಯ : ನ್ಯಾಯಾಧೀಶರಾದ ಜಿ.ಡಿ. ಮಹಾವರ್ಕರ್ವಚನ:  -ಸೊಡ್ಡಳ ಬಾಚರಸನಿಮ್ಮ ಮಕ್ಕಳು ತುಂಬಾ ಮಂಕು ಇದ್ರೆ ಓದಲ್ಲ ಮತ್ತು ಹೇಳಿದ ಮಾತು ಕೇಳೋದಿಲ್ಲ ಅಂದರೆ ಹೀಗೆ ಮಾಡಿರಿ..!?