ಕೆನರಾ ಬ್ಯಾಂಕ್ನಿಂದ ಹೆಣ್ಣು ಮಕ್ಕಳಿಗೆ ವಿದ್ಯಾರ್ಥಿವೇತನ ವಿತರಣೆ
ಚಿತ್ರದುರ್ಗ : ಕೆನರಾ ಬ್ಯಾಂಕ್ ಚಿತ್ರದುರ್ಗ ಶಾಖೆಯ ವತಿಯಿಂದ ‘ಕೆನರಾ ವಿದ್ಯಾ ಜ್ಯೋತಿ 2026’ ವಿದ್ಯಾರ್ಥಿವೇತನ ಯೋಜನೆಯಡಿ ಚಿತ್ರದುರ್ಗ ತಾಲ್ಲೂಕು ಹಿರೇಗುಂಟನೂರು ಗ್ರಾಮದ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ ಮತ್ತು ಪ್ರಶಸ್ತಿ ಪತ್ರ ವಿತರಿಸಲಾಯಿತು.
ಚಿತ್ರದುರ್ಗದ ಕೆನರಾ ಬ್ಯಾಂಕ್ ವತಿಯಿಂದ ಶನಿವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗ ಹಾಗೂ ಜಾತಿಯ ಹೆಣ್ಣು ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು.
ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕ್ ಚಿತ್ರದುರ್ಗ ಶಾಖೆಯ ಮುಖ್ಯ ಪ್ರಬಂಧಕರಾದ ಎಂ.ರಾಘವೇಂದ್ರ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಧನಂಜಯ ಹಾಗೂ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಎನ್.ಆರ್.ಭವಾನಿ ಹಾಗೂ ವಿದ್ಯಾರ್ಥಿಗಳು ಇದ್ದರು.