ಈ ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ.!
ಶಿವಮೊಗ್ಗ: ಸಾಗರ ತಾಲೂಕಿನಲ್ಲಿ ಇಂದು ಭಾರೀ ಮಳೆಯಾಗಿದ್ದು, ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು IMD ಮುನ್ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ನಾಳೆ ಸಾಗರ ತಾಲೂಕಿನಲ್ಲಿರುವ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಪದವಿ ಪೂರ್ವ(PU) ಕಾಲೇಜುಗಳು ಹಾಗೂ ವೃತ್ತಿಪರ ಶಿಕ್ಷಣ ಸಂಸ್ಥೆಗಳಾದ ಡಿಪ್ಲೋಮಾ ಮತ್ತು ITI ಕಾಲೇಜುಗಳಿಗೆ ರಜೆ ಘೋಷಿಸಿ, ತಹಶೀಲ್ದಾರ್ ಡಾ. ಪ್ರತಿಭಾ R ಆದೇಶಿಸಿದ್ದಾರೆ.