-ಉರಿಲಿಂಗಪೆದ್ದಿ ಅವರ ವಚನ.!
ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಅಮೃತಕ್ಕೆ ಹಸಿವುಂಟೆ ? ಜಲಕ್ಕೆ ತೃಷೆಯುಂಟೆ ?
ಮಹಾಜ್ಞಾನಸ್ವರೂಪಂಗೆ ವಿಷಯವುಂಟೆ ?
ಸದ್ಗುರುಕಾರುಣ್ಯವ ಪಡೆದು ಲಿಂಗಾರ್ಚನೆಯಂ ಮಾಡುವ
ಮಹಾಭಕ್ತಂಗೆ ಬೇರೆ ಮುಕ್ತಿಯ ಬಯಕೆ ಉಂಟೆ ?
ಅವರುಗಳಿಗೆ ಅದು ಸ್ವಯಂಭು ಸಹಜಸ್ವಭಾವ.
ಇನ್ನು ತೃಪ್ತಿ ಅಪ್ಯಾಯನ ಅರಸಲುಂಟೆ ? ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.
-ಉರಿಲಿಂಗಪೆದ್ದಿ