ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಎನ್ನ ಕನ್ನಡಿ ಒಳ ಹೊರಗಿಲ್ಲ.
ಎನ್ನ ಘಳಿಹ ಮುಟ್ಟನೊಳಕೊಂಡ
ಚಿರ ಹಡಪಕ್ಕೆ ಅಳವಲ್ಲ.
ಕತ್ತಿಯ ಬಸವಣ್ಣ ಕೊಟ್ಟ.
ಕತ್ತರಿಯ ಚೆನ್ನಬಸವಣ್ಣ ಕೊಟ್ಟ.
ಕಿತ್ತುಹಾಕುವ ಚಿಮ್ಮಟಿಕೆಯ ಪ್ರಭುರಾಯ ಕೂಟ್ಟ.
ಮಿಕ್ಕಾದ ಎನ್ನಯ ಮುಟ್ಟ ಸತ್ಯಶರಣರು ಕೊಟ್ಟರು.
ದೃಷ್ಟವ ತೋರಿ ಅಡಗುವ ಮುಕುರವ ಕೊಟ್ಟವರ ಹೇಳುವೆನು
ದೃಷ್ಟ ಪ್ರಸಿದ್ಧ ಆಪ್ರತಿಮ ಪ್ರಸನ್ನ
ಚೆನ್ನಬಸವಣ್ಣ ಪ್ರಿಯ ಕಮಳೇಶ್ವರಲಿಂಗವುಎನಗೆ ದೃಷ್ಟವ ಕೊಟ್ಟು ತಾ ಬೆಳಗಿನೊಳಗಾದ!
-ಕನ್ನಡಿಕಾಯಕದ ಅಮ್ಮಿದೇವಯ್ಯ