ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಕಣ್ಣು ನೋಡಿ ರೂಪ ಹೇಳದಂತಿರಬೇಕು.
ಕಿವಿ ಕೇಳಿ ಶಬ್ದವ ನುಡಿಯಲರಿಯದಂತಿರಬೇಕು.
ಮನವುಂಡು ಡರ್ರನೆ ತೇಗಿ ರುಚಿಯ ಪೇಳಲರಿಯದಂತಿರಬೇಕು.
ಮನವ ತೋರುವ ಗುರುವಿನ ಕಾರುಣ್ಯದನುವ ಕಾಬ ಶಿಷ್ಯಂಗೆ,ಮನೋಮೂರ್ತ ಮುನ್ನವೆಯಾಯಿತ್ತೆಂದ ಕಲಿದೇವಯ್ಯ.
-ಮಡಿವಾಳ ಮಾಚಿದೇವ