ದಾವಣಗೆರೆ: ವಿದ್ಯಾನಗರದ ಕುವೆಂಪು ಕನ್ನಡ ಭವನದಲ್ಲಿ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಆಯೋಜಿಸಲಾಗಿದ್ದ ಮೈಸೂರು ಸಂಸ್ಥಾನದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಪುತ್ಥಳಿಗೆ ದೇಣಿಗೆ ನೀಡಿದ ನಗರದ ಬೆಳ್ಳಿ, ಬಂಗಾರದ ಉದ್ಯಮಿ ವಾಸುದೇವ ಎಲ್.ರಾಯ್ಕರ್ ಅವರನ್ನು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸನ್ಮಾನಿಸಿದರು.
ಈ ವೇಳೆ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ದೂಡ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಈಶ್ವರೀಯ ವಿದ್ಯಾಲಯದ ಲೀಲಾಜಿ, ಕಸಾಪ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ, ಕಿರುವಾಡಿ ಗಿರಿಜಮ್ಮ ಇತರರು ಇದ್ದರು.