ಗುಜರಾತ್ ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ 20 ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿ - BC Suddi
ಗುಜರಾತ್ ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ 20 ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿ

ಗುಜರಾತ್ ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ 20 ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿ

ಅಹ್ಮದಾಬಾದ್: ಗುಜರಾತ್ ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ಪ್ರಮುಖ 20 ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.

ನೈಟ್ ಕರ್ಫ್ಯೂ ಜಾರಿ ಮಾಡುವ ಕುರಿತು ಮಾತನಾಡಿದ ಮುಖ್ಯಮಂತ್ರಿ ರೂಪಾಣಿ ಅವರು, ಈಗಾಗಲೇ ಅಹ್ಮದಾಬಾದ್, ಸೂರತ್ ಮತ್ತು ವಡೋದರಾ, ರಾಜ್‌ಕೋಟ್‌ನಲ್ಲಿ ರಾತ್ರಿ 9 ರಿಂದ ಬೆಳಿಗ್ಗೆ 6 ರವರೆಗೆ ನೈಟ್​ ಕರ್ಫ್ಯೂ ಜಾರಿಯಲ್ಲಿದೆ. ಆದರೆ ಇದೀಗ ಇನ್ನೂ ಕೆಲವು ನಗರಗಳಲ್ಲಿ ಕರ್ಫ್ಯೂ ವಿಧಿಸಲು ತೀರ್ಮಾನಿಸಲಾಗಿದೆ. ಒಟ್ಟು 20 ನಗರಗಳಲ್ಲಿ ರಾತ್ರಿ 8 ರಿಂದ ಬೆಳಿಗ್ಗೆ 6 ಗಂಟೆ ವರೆಗೆ ನೈಟ್ ಕರ್ಫ್ಯೂ ಇರಲಿದೆ. ಈ ನಿಯಮ ಇಂದಿನಿಂದ ಆರಂಭವಾಗಲಿದ್ದು, ಏಪ್ರಿಲ್ 30 ರವರೆಗೆ ಜಾರಿಯಲ್ಲಿರಲಿದೆ ಎಂದು ತಿಳಿಸಿದರು.

error: Content is protected !!