ರಾಜ್ಯದಲ್ಲಿ ಪೂರ್ಣ ಪ್ರಮಾಣದ ಲಾಕ್‌ಡೌನ್ ಇಲ್ಲ: ಸಿಎಂ ಸ್ಪಷ್ಟನೆ - BC Suddi
ರಾಜ್ಯದಲ್ಲಿ ಪೂರ್ಣ ಪ್ರಮಾಣದ ಲಾಕ್‌ಡೌನ್ ಇಲ್ಲ: ಸಿಎಂ ಸ್ಪಷ್ಟನೆ

ರಾಜ್ಯದಲ್ಲಿ ಪೂರ್ಣ ಪ್ರಮಾಣದ ಲಾಕ್‌ಡೌನ್ ಇಲ್ಲ: ಸಿಎಂ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಪೂರ್ಣ ಪ್ರಮಾಣದ ಲಾಕ್‌ಡೌನ್ ಇಲ್ಲ. ಈಗಾಗಲೇ ಜಾರಿಯಲ್ಲಿರುವ ಜನತಾ ಕರ್ಫ್ಯೂ ಮಾತ್ರ ಮುಂದುವರಿಯುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, “ರೆಮಿಡಿಸಿವರ್ ಔಷಧಿ ನಿರ್ವಹಣೆಗೆ, ಮಾನವಸಂಪನ್ಮೂಲ ನಿರ್ವಹಣೆಗೆ ಡಿಸಿಎಂ ಅಶ್ವಥನಾರಾಯಣ್ ಅವರಿಗೆ ಜವಾಬ್ದಾರಿ ಹೊರಿಸಲಾಗಿದೆ. ಬೆಡ್ ವ್ಯವಸ್ಥೆ, ಬೆಡ್ ಸಮಸ್ಯೆ ನಿರ್ವಹಣೆ ಜವಾಬ್ದಾರಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಆರ್.ಅಶೋಕ್ ಅವರಿಗೆ ವಹಿಸಿದ್ದೇವೆ. ವಾರ್ ರೂಂ, ಕಾಲ್ ಸೆಂಟರ್ ನಿರ್ವಹಣಾ ಜವಾಬ್ದಾರಿ ಅರವಿಂದ್ ಲಿಂಬಾವಳಿಗೆ ವಹಿಸಿರುವುದಾಗಿ ಸಿಎಂ ಮಾಹಿತಿ ನೀಡಿದರು.

ಚಾಮರಾಜನಗರ ದುರಂತ ಬಗ್ಗೆ ವಿಷಾದ ವ್ಯಕ್ತಪಡಿಸಿದ ಸಿಎಂ, ಇಂತಹ ಘಟನೆ ನಡೆಯಬಾರದಿತ್ತು. ಪ್ರಕರಣಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಮುಂದೆ ಇಂತಹ ಘಟನೆ ಮರುಕಳಿಸಬಾರದಂತೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.