ಮೇ 2 ರಂದು ಮಧ್ಯಾಹ್ನ 2 ಗಂಟೆಗೆನಿಮ್ಮ ರಾಜೀನಾಮೆಯನ್ನು ರಾಜ್ಯಪಾಲರಿಗೆ ಹಸ್ತಾಂತರಿಸಲು ಸಿದ್ಧರಾಗಿರಿ: ಅಮಿತ್ ಶಾ - BC Suddi
ಮೇ 2 ರಂದು ಮಧ್ಯಾಹ್ನ 2 ಗಂಟೆಗೆನಿಮ್ಮ ರಾಜೀನಾಮೆಯನ್ನು ರಾಜ್ಯಪಾಲರಿಗೆ ಹಸ್ತಾಂತರಿಸಲು ಸಿದ್ಧರಾಗಿರಿ: ಅಮಿತ್ ಶಾ

ಮೇ 2 ರಂದು ಮಧ್ಯಾಹ್ನ 2 ಗಂಟೆಗೆನಿಮ್ಮ ರಾಜೀನಾಮೆಯನ್ನು ರಾಜ್ಯಪಾಲರಿಗೆ ಹಸ್ತಾಂತರಿಸಲು ಸಿದ್ಧರಾಗಿರಿ: ಅಮಿತ್ ಶಾ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಜನ ಹೇಳಿದರೆ ಹುದ್ದೆಗೆ ರಾಜೀನಾಮೆ ನೀಡಲು ಸಿದ್ಧ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಉತ್ತರ 24 ಪರಗಣ ಜಿಲ್ಲೆಯ ಬಸೀರ್‌ಹಾಟ್‌ನಲ್ಲಿ ಚುನಾವಣಾ ಪ್ರಚಾರ ರ್‍ಯಾಲಿ ಉದ್ದೇಶಿಸಿ , ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿದ ವಿಚಾರಕ್ಕೆ ಪ್ರತ್ಯುತ್ತರ ನೀಡಿ ಮಾತನಾಡಿದ ಅವರು, ” ಸಾರ್ವಜನಿಕರು ಬಯಸಿದಾಗ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಆದರೆ ನೀವು ರಾಜೀನಾಮೆ ನೀಡಲು ಸಿದ್ಧರಾಗಿರಬೇಕು.

“ಮೇ 2 ರಂದು ಮಧ್ಯಾಹ್ನ 2 ಗಂಟೆಗೆನಿಮ್ಮ ರಾಜೀನಾಮೆಯನ್ನು ರಾಜ್ಯಪಾಲರಿಗೆ ಹಸ್ತಾಂತರಿಸಲು ಸಿದ್ಧರಾಗಿರಿ” ಎಂದು ಅವರು ಹೇಳಿದರು. “ದೀದಿ (ಮಮತಾ) ನನ್ನ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಪಶ್ಚಿಮ ಬಂಗಾಳದ ಜನ ಹೇಳಿದರೆ ನಾನು ರಾಜೀನಾಮೆ ನೀಡುತ್ತೇನೆ. ತಲೆಬಾಗಿಸಿ ಆ ಕೆಲಸ ಮಾಡಬಲ್ಲೆ. ಆದರೆ ವಿಧಾನಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವು ಸೋಲನುಭವಿಸಲಿದೆ. ಮೇ 2ರಂದು ಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಸ್ಥಾನ ತ್ಯಜಿಸಬೇಕು” ಎಂದು ಹೇಳಿದ್ದಾರೆ.

ನಾಲ್ಕನೇ ಹಂತದ ಮತದಾನದ ವೇಳೆ ಕೂಚ್‌ ಬಿಹಾರ್ ಜಿಲ್ಲೆಯ ಸೀತಾಲಕುಚಿ ಕ್ಷೇತ್ರದ 126ನೇ ಸಂಖ್ಯೆಯ ಮತಗಟ್ಟೆಯಲ್ಲಿ ಜನರು ಸಿಐಎಸ್‌ಎಫ್‌ (ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ) ಸಿಬ್ಬಂದಿಯ ಬಂದೂಕು ಕಸಿದುಕೊಳ್ಳಲು ಯತ್ನಿಸಿದ್ದರು. ಆ ಸಂದರ್ಭ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ವರು ಮೃತಪಟ್ಟಿದ್ದರು.

ಪ್ರತಿಯೊಬ್ಬ ನಾಗರಿಕ ಕೂಡ ಕೊರೋನಾ ಮಾರ್ಗಸೂಚಿ, ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯವಿದೆ: ಸಚಿವ ಡಾ. ಸುಧಾಕರ್