ಈ ವಾರದೊಳಗೆ ಇನ್ನೂ 12 ಲಕ್ಷ ಡೋಸ್ ಲಸಿಕೆ ರವಾನೆಯಾಗಲಿದೆ : ಸಚಿವ ಕೆ. ಸುಧಾಕರ್ - BC Suddi
ಈ ವಾರದೊಳಗೆ ಇನ್ನೂ 12 ಲಕ್ಷ ಡೋಸ್ ಲಸಿಕೆ ರವಾನೆಯಾಗಲಿದೆ : ಸಚಿವ ಕೆ. ಸುಧಾಕರ್

ಈ ವಾರದೊಳಗೆ ಇನ್ನೂ 12 ಲಕ್ಷ ಡೋಸ್ ಲಸಿಕೆ ರವಾನೆಯಾಗಲಿದೆ : ಸಚಿವ ಕೆ. ಸುಧಾಕರ್

ಬೆಂಗಳೂರು:ಕರ್ನಾಟಕಕ್ಕೆ 4 ಲಕ್ಷ ಡೋಸ್ ಕೋವಿಡ್ ಲಸಿಕೆ ಆಗಮಿಸಿದೆ. ಕೇಂದ್ರ ಸರ್ಕಾರದ ಭರವಸೆಯಂತೆ ಈ ವಾರದೊಳಗೆ ಇನ್ನೂ 12 ಲಕ್ಷ ಡೋಸ್ ಲಸಿಕೆ ರವಾನೆಯಾಗಲಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು, ನಿನ್ನೆ ತಡರಾತ್ರಿ ರಾಜಕ್ಕೆ 4 ಲಕ್ಷ ಡೋಸ್ ಕೊರೊನಾ ಲಸಿಕೆ ಆಗಮಿಸಿದೆ ಎಂದರು.

ಕೇಂದ್ರ  ಸರ್ಕಾರದ ಭರವಸೆಯಂತೆ ಈ ವಾರದೊಳಗೆ ಇನ್ನೂ 12 ಲಕ್ಷ ಡೋಸ್ ಲಸಿಕೆ ರವಾನೆಯಾಗಲಿದೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲಸಿಕೆಯ ಕೊರತೆ ಉಂಟಾಗದ0ತೆ ಕ್ರಮ ಕೈಗೊಂಡಿದ್ದು,ಎಲ್ಲ ಅರ್ಹ ನಾಗರೀಕರು ಕೂಡಲೇ ನೋಂದಣಿ ಮಾಡಿಕೊಂಡು ಇದರ ಸದುಪಯೋಗ ಪಡೆಯಬೇಕೆಂದು ಕೋರುತ್ತೇನೆ ಎಂದಿದ್ದಾರೆ. ದೇಶದಲ್ಲಿ ಸದ್ಯ 60 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟ ಇತರ ರೋಗಪೀಡಿತರು ಮಾತ್ರ ಲಸಿಕೆ ಪಡೆಯಬಹುದಾಗಿದೆ. ಆದರೆ ಎಪ್ರಿಲ್ 1ರಿಂದ 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರೂ ಕೋವಿಡ್ ಲಸಿಕೆ ಪಡೆಯಬಹುದಾಗಿದೆ.

 

error: Content is protected !!