ಈ ವರ್ಷ ಕೇವಲ ಒಂದು ಬಾರಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು : ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ - BC Suddi
ಈ ವರ್ಷ ಕೇವಲ ಒಂದು ಬಾರಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು : ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್

ಈ ವರ್ಷ ಕೇವಲ ಒಂದು ಬಾರಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು : ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್

ನೀಟ್ 2021ರ ಪರೀಕ್ಷೆಯನ್ನ ನಡೆಸಲು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ ಟಿಎ) ದಿನಾಂಕವನ್ನ ಪ್ರಕಟಿಸಿದ ಕೆಲವೇ ದಿನಗಳಲ್ಲಿ, ಈ ವರ್ಷ ಕೇವಲ ಒಂದು ಬಾರಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ‘ನಿಶಾಂಕ್’ ಮಾ.15ರಂದು ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡಿರುವ ಪೋಖ್ರಿಯಾಲ್, ‘2021ರಲ್ಲಿ ನೀಟ್ ಅನ್ನು ಎನ್ ಟಿಎ ಯಿಂದ ಒಂದು ಬಾರಿ ಮಾತ್ರ ನಡೆಸಲಾಗುತ್ತದೆ. ಈ ಸಂಬಂಧ ಯಾವುದೇ ಮನವಿ ಪತ್ರ ಬಂದಿಲ್ಲ ಎಂದು ಎನ್ ಟಿಎ ಮಾಹಿತಿ ನೀಡಿದೆ’ ಎಂದು ಹೇಳಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದೊಂದಿಗೆ ಸಮಾಲೋಚಿಸಿ, ವೈದ್ಯಕೀಯ ವಿಜ್ಞಾನಗಳ ಸ್ನಾತಕೋತ್ತಕ ಕಾರ್ಯಕ್ರಮದ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ಅನ್ನು ಶಿಕ್ಷಣ ಸಚಿವಾಲಯದ ಅಡಿಯಲ್ಲಿ ಎನ್ ಟಿಎ ನಡೆಸುತ್ತದೆ ಎಂದು ಸಚಿವರು ಪುನರುಚ್ಚರಿಸಿದರು.

 

error: Content is protected !!