ದೆಹಲಿಯಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು: ದೆಹಲಿ ಸಿಎಂ ಕೇಜ್ರಿವಾಲ್‌ - BC Suddi
ದೆಹಲಿಯಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು: ದೆಹಲಿ ಸಿಎಂ ಕೇಜ್ರಿವಾಲ್‌

ದೆಹಲಿಯಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು: ದೆಹಲಿ ಸಿಎಂ ಕೇಜ್ರಿವಾಲ್‌

ನವದೆಹಲಿ : ದೆಹಲಿಯಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ತಿಳಿಸಿದ್ದಾರೆ.

“ದೆಹಲಿ ಸರ್ಕಾರವು 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆಗಳನ್ನು ನೀಡಲು ನಿರ್ಧರಿಸಿದೆ. ಇಂದು ನಾವು 1.34 ಕೋಟಿ ಲಸಿಕೆಗಳನ್ನು ಖರೀದಿಸಲು ಅನುಮೋದನೆ ನೀಡಿದ್ದೇವೆ. ಶೀಘ್ರದಲ್ಲೇ ಅದನ್ನು ಖರೀದಿಸಲಾಗುವುದು. ಜನರಿಗೆ ಬೇಗನೆ ಕೊರೊನಾ ಲಸಿಕೆ ನೀಡಲಾಗುವುದು” ಎಂದು ಕೇಜ್ರಿವಾಲ್ ತಿಳಿಸಿ‌ದ್ದಾರೆ.

ಇನ್ನು ಈಗಾಗಲೇ ಕೇರಳ, ಮಹಾರಾಷ್ಟ್ರ, ಸೇರಿದಂತೆ ಹಲವು ರಾಜ್ಯಗಳು ತಮ್ಮ ರಾಜ್ಯದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ ನೀಡುತ್ತೇವೆ ಎಂದು ಹೇಳಿದೆ.

ಬೆಂಗಳೂರು : ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಐವರಿಗೆ ಮಾತ್ರ ಅವಕಾಶ: ಪರಿಷ್ಕೃತ ಆದೇಶ